< ಜ್ಞಾನೋಕ್ತಿಗಳು 18 >

1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.
ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.
ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
3 ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.
5 ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.
ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
6 ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
7 ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.
ಜ್ಞಾನಹೀನನಿಗೆ ಬಾಯಿ ನಾಶ, ತುಟಿಗಳು ಪಾಶ.
8 ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.
ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
9 ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.
ಕೆಲಸಗಳ್ಳನು ಕೆಡುಕನಿಗೆ ತಮ್ಮ.
10 ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.
೧೦ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
11 ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
೧೧ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
12 ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
೧೨ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13 ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.
೧೩ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14 ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?
೧೪ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.
೧೫ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
16 ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.
೧೬ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
17 ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.
೧೭ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.
೧೮ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.
೧೯ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.
೨೦ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
21 ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
೨೧ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
22 ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
೨೨ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
23 ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.
೨೩ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
24 ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
೨೪ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.

< ಜ್ಞಾನೋಕ್ತಿಗಳು 18 >