< ಜ್ಞಾನೋಕ್ತಿಗಳು 19 >
1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.
行為純正的貧窮人 勝過乖謬愚妄的富足人。
2 ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.
心無知識的,乃為不善; 腳步急快的,難免犯罪。
3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
人的愚昧傾敗他的道; 他的心也抱怨耶和華。
4 ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ.
財物使朋友增多; 但窮人朋友遠離。
5 ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.
作假見證的,必不免受罰; 吐出謊言的,終不能逃脫。
6 ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
好施散的,有多人求他的恩情; 愛送禮的,人都為他的朋友。
7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.
貧窮人,弟兄都恨他; 何況他的朋友,更遠離他! 他用言語追隨,他們卻走了。
8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.
得着智慧的,愛惜生命; 保守聰明的,必得好處。
9 ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.
作假見證的,不免受罰; 吐出謊言的,也必滅亡。
10 ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.
愚昧人宴樂度日是不合宜的; 何況僕人管轄王子呢?
11 ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.
人有見識就不輕易發怒; 寬恕人的過失便是自己的榮耀。
12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
王的忿怒好像獅子吼叫; 他的恩典卻如草上的甘露。
13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ.
愚昧的兒子是父親的禍患; 妻子的爭吵如雨連連滴漏。
14 ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
房屋錢財是祖宗所遺留的; 惟有賢慧的妻是耶和華所賜的。
15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.
懶惰使人沉睡; 懈怠的人必受飢餓。
16 ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.
謹守誡命的,保全生命; 輕忽己路的,必致死亡。
17 ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.
憐憫貧窮的,就是借給耶和華; 他的善行,耶和華必償還。
18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.
趁有指望,管教你的兒子; 你的心不可任他死亡。
19 ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.
暴怒的人必受刑罰; 你若救他,必須再救。
20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.
你要聽勸教,受訓誨, 使你終久有智慧。
21 ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
人心多有計謀; 惟有耶和華的籌算才能立定。
22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.
施行仁慈的,令人愛慕; 窮人強如說謊言的。
23 ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.
敬畏耶和華的,得着生命; 他必恆久知足,不遭禍患。
24 ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!
懶惰人放手在盤子裏, 就是向口撤回,他也不肯。
25 ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.
鞭打褻慢人,愚蒙人必長見識; 責備明哲人,他就明白知識。
26 ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.
虐待父親、攆出母親的, 是貽羞致辱之子。
27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.
我兒,不可聽了教訓 而又偏離知識的言語。
28 ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.
匪徒作見證戲笑公平; 惡人的口吞下罪孽。
29 ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
刑罰是為褻慢人預備的; 鞭打是為愚昧人的背預備的。