< ಜ್ಞಾನೋಕ್ತಿಗಳು 20 >

1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.
清酒令人輕狂,醇酒使人發瘋;凡沉溺於酒的,必不是明智人。
2 ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.
君王震怒,有如獅子的咆哮;觸怒他的,危害自己的性命。
3 ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.
平息爭端,是人的光榮;凡是愚人,都喜愛爭論。
4 ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.
懶惰人一寒冷,便不耕作;收獲之時,他必一無所獲。
5 ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು.
人心的謀略,有如深水,唯有聰明人,纔能汲取。
6 ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
自命為仁者,比比皆是;但有誰找到忠貞的人﹖
7 ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.
正義的人,必然為人正直;他的後代子孫,必然有福。
8 ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
君王高坐在判座上,所有邪惡一目了然。
9 “ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?
有誰能說:「我保持了心靈的潔淨,我是純潔無罪的﹖」
10 ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.
不同的衡量,不同的升斗:二者皆為上主同樣厭惡。
11 ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.
孩童的行為,潔淨正執直與否,由他的舉動便可認出。
12 ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.
能聽的耳朵,能看的眼睛:二者皆為上主所造。
13 ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!
不要貪睡眠,免得你受窮;兩眼睜開,纔能得飽食。
14 “ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ.
顧客常說:「不好,不好! 」但一離去,讚不絕口。
15 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.
雖有大批黃金寶石,但最寶貴的,還是明智的唇舌。
16 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.
誰為外方人作保,拿去他的衣服;誰為異邦人作保,以他本人作質。
17 ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು.
騙來的食物頗覺香甜,事後口中卻滿是砂礫。
18 ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.
運籌帷幄,必先要商討;進行戰事,必該憑智謀。
19 ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.
遊蕩閒談的,必洩露秘密;張口饒舌的,別與他交結。
20 ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.
凡是辱罵自己父母的人,他的燈必在幽暗中熄滅。
21 ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.
起初容易得來的財物,最後也不會得到祝福。
22 ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.
你切不可說:「我以惡報惡;」應信賴上主,他必拯救你。
23 ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.
不同的衡量,為上主所惡;不同的天秤,實屬不道德。
24 ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?
世人的腳步,由上主支配;人那能了解自己的道路﹖
25 ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.
人若冒然說「聖,」許願後纔反省,這是自投羅網。
26 ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.
智慧的君王簸揚惡人,且用車輪來壓軋他們。
27 ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.
人的靈魂是天主的燈,探照肺腑的一切隱密。
28 ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
仁愛和忠誠,是君王的保障;他的寶座,是賴慈愛而支撐。
29 ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ.
少年人的光榮,在於他們的魄力;老年人的榮耀,在於他們的白髮。
30 ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.
見傷的鞭打能清除邪惡,杖擊能觸及肺腑的深處。

< ಜ್ಞಾನೋಕ್ತಿಗಳು 20 >