< ಜ್ಞಾನೋಕ್ತಿಗಳು 24 >

1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು; ಇಲ್ಲವೆ ಅವರ ಸಂಗಡ ಇರುವುದಕ್ಕೆ ಅಪೇಕ್ಷಿಸಬೇಡ.
لَا تَحْسِدْ أَهْلَ الشَّرِّ، وَلا تَشْتَهِ مُعَاشَرَتَهُمْ،١
2 ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ.
لأَنَّ قُلُوبَهُمْ تَتَآمَرُ عَلَى ارْتِكَابِ الظُّلْمِ، وَأَلْسِنَتَهُمْ تَنْطِقُ بِالإِسَاءَةِ.٢
3 ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ. ತಿಳುವಳಿಕೆಯಿಂದ ಅದು ಸ್ಥಿರಗೊಳ್ಳುತ್ತದೆ.
بِالْحِكْمَةِ يُبْنَى الْبَيْتُ، وَبِالْفَهْمِ يَرْسَخُ.٣
4 ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬುವುದು.
بِالْمَعْرِفَةِ تَكْتَظُّ الْحُجْرَاتُ بِكُلِّ نَفِيسٍ، وَكُنُوزٍ نَادِرَةٍ.٤
5 ಬಲವುಳ್ಳವನಿಗಿಂತ ಜ್ಞಾನಿಯು ಶಕ್ತಿಶಾಲಿ; ತಿಳುವಳಿಕೆಯುಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
الرَّجُلُ الْحَكِيمُ يَتَمَتَّعُ بِالْعِزَّةِ، وَذُو الْمَعْرِفَةِ يَزْدَادُ قُوَّةً،٥
6 ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು, ಬಹುಮಂದಿ ಸಲಹೆಗಾರರು ಇರುವಲ್ಲಿ ಜಯವಿರುವುದು.
لأَنَّكَ بِحُسْنِ التَّدْبِيرِ تَخُوضُ حَرْبَكَ، وَبِكَثْرَةِ الْمُشِيرِينَ يَكُونُ الْخَلاصُ.٦
7 ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.
الْحِكْمَةُ أَسْمَى مِنْ أَنْ يُدْرِكَهَا الْجَاهِلُ، وَفِي سَاحَةِ الْمَدِينَةِ لَا يَفْتَحُ فَاهُ!٧
8 ಕೇಡನ್ನು ಕಲ್ಪಿಸುವವನು ಕುಚೋದ್ಯಗಾರನೆಂದು ಕರೆಯಲ್ಪಡುವನು.
الْمُتَفَكِّرُ فِي ارْتِكَابِ الشَّرِّ يُدْعَى مُتَآمِراً.٨
9 ಬುದ್ಧಿಹೀನನ ಆಲೋಚನೆಯು ಪಾಪಮಯ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
نَوَايَا الْجَاهِلِ خَطِيئَةٌ، وَالْمُسْتَهْزِئُ رِجْسٌ عِنْدَ النَّاسِ.٩
10 ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, ನಿನ್ನ ಬಲವು ಕೊಂಚವಾಗಿದೆ.
إِنْ عَيِيتَ فِي يَوْمِ الضِّيقِ تَكُونُ وَاهِنَ الْقُوَى.١٠
11 ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು; ಕೊಲೆಗೆ ನೇಮಿತವಾದವರನ್ನು ನೀನು ರಕ್ಷಿಸು.
أَنْقِذِ الْمَسُوقِينَ إِلَى الْمَوْتِ وَرُدَّ الْمُتَعَثِّرِينَ الذَّاهِبِينَ إِلَى الذَّبْحِ.١١
12 ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
إِنْ قُلْتَ: إِنَّنَا لَمْ نَعْرِفْ هَذَا، أَفَلا يَفْهَمُ هَذَا وَازِنُ الْقُلُوبِ؟ أَلا يُدْرِكُهُ رَاعِي النُّفُوسِ، فَيُجَازِيَ الإِنْسَانَ بِمُقْتَضَى عَمَلِهِ؟١٢
13 ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ; ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.
يَا ابْنِي، كُلْ عَسَلاً لأَنَّهُ طَيِّبٌ، وَكَذَلِكَ الشَّهْدَ لأَنَّهُ حُلْوٌ لِمَذَاقِكَ.١٣
14 ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ. ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ. ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.
لِذَلِكَ الْتَمِسِ الْحِكْمَةَ لِنَفْسِكَ، فَإِذَا وَجَدْتَهَا تَحْظَى بِالثَّوَابِ وَلا يَخِيبُ رَجَاؤُكَ.١٤
15 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.
لَا تَكْمُنْ كَمَا يَكْمُنُ الشِّرِّيرُ لِمَسْكَنِ الصِّدِّيقِ وَلا تُدَمِّرْ مَنْزِلَهُ،١٥
16 ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡು ಬಂದಾಗ ಬೀಳುವನು.
لأَنَّ الصِّدِّيقَ يَسْقُطُ سَبْعَ مَرَّاتٍ، وَمَعَ ذَلِكَ يَنْهَضُ، أَمَّا الأَشْرَارُ فَيَتَعَثَّرُونَ بِالشَّرِّ.١٦
17 ನಿನ್ನ ಶತ್ರು ಬಿದ್ದರೆ ಆನಂದಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
لَا تَشْمَتْ لِسُقُوطِ عَدُوِّكَ، وَلا يَبْتَهِجْ قَلْبُكَ إِذَا عَثَرَ،١٧
18 ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು.
لِئَلّا يَشْهَدَ الرَّبُّ، فَيَسُوءَ الأَمْرُ فِي عَيْنَيْهِ وَيَصْرِفَ غَضَبَهُ عَنْهُ.١٨
19 ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ; ಇಲ್ಲವೆ ದುಷ್ಟರನ್ನು ಕಂಡು ಅಸೂಯೆಪಡಬೇಡ.
لَا يَتَآكَلْ قَلْبُكَ غَيْظاً مِنْ فَاعِلِي الإِثْمِ، وَلا تَحْسِدِ الأَشْرَارَ،١٩
20 ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ; ದುಷ್ಟರ ದೀಪವು ಆರಿಹೋಗುವುದು.
إِذْ لَا ثَوَابَ لِلشِّرِّيرِ، وَسِرَاجُهُ يَنْطَفِئُ.٢٠
21 ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; ತಿರುಗಿಬೀಳುವವರ ಸಹವಾಸ ಮಾಡಬೇಡ,
يَا ابْنِي اتَّقِ الرَّبَّ وَالْمَلِكَ، وَلا تُعَاشِرِ الْمُتَقَلِّبِينَ،٢١
22 ಏಕೆಂದರೆ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; ಅವರು ಯಾವ ವಿಪತ್ತುಗಳನ್ನು ತರಬಹುದು ಎಂದು ಯಾರಿಗೆ ತಿಳಿದಿದೆ?
لأَنَّ هَذَيْنِ الاثْنَيْنِ يُنْزِلانِ الْبَلِيَّةَ بَغْتَةً عَلَيْهِمْ. وَمَنْ يَدْرِي أَيَّةَ كَوَارِثَ تَصْدُرُ عَنْهُمَا؟٢٢
23 ಇವು ಜ್ಞಾನಿಗಳ ಹೇಳಿಕೆಗಳಾಗಿವೆ: ನ್ಯಾಯ ವಿಚಾರಣೆಯಲ್ಲಿ ಪಕ್ಷಪಾತವು ಸರಿಯಲ್ಲ.
وَهَذِهِ أَيْضاً أَقْوَالُ الْحُكَمَاءِ: التَّحَيُّزُ فِي الْحُكْمِ مُشِينٌ،٢٣
24 ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು; ಜನಾಂಗಗಳು ಅವನನ್ನು ದೂಷಿಸುವರು.
وَمَنْ يَقُولُ لِلشِّرِّيرِ: أَنْتَ بَرِيءٌ، تَلْعَنُهُ الشُّعُوبُ وَتَمْقُتُهُ الأُمَمُ.٢٤
25 ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು; ಅವರ ಮೇಲೆ ಒಳ್ಳೆಯ ಆಶೀರ್ವಾದವು ಬರುವುದು.
أَمَّا الَّذِينَ يُوَبِّخُونَهُ فَلَهُمُ الْغِبْطَةُ وَتَحُلُّ عَلَيْهِمْ بَرَكَةُ الْخَيْرِ.٢٥
26 ಪ್ರಾಮಾಣಿಕವಾದ ಉತ್ತರವು ತುಟಿಗೆ ಮುದ್ದಿಟ್ಟಂತೆ.
مَنْ يُجِيبُ بِقَوْلٍ صَائِبٍ يَحْظَى بِالْكَرَامَةِ.٢٦
27 ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. ನಿನ್ನ ಹೊಲಗಳನ್ನು ಸಿದ್ಧಪಡಿಸು; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
أَنْجِزْ عَمَلَكَ فِي الْخَارِجِ وَهَيِّئْ حَقْلَكَ لِنَفْسِكَ، ثُمَّ ابْنِ بَيْتَكَ.٢٧
28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.
لَا تَشْهَدْ ضِدَّ قَرِيبِكَ مِنْ غَيْرِ دَاعٍ، فَلِمَاذَا تَنْطِقُ شَفَتَاكَ زُوراً؟٢٨
29 ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ.
لَا تَقُلْ: سَأُعَامِلُهُ بِمِثْلِ مَا عَامَلَنِي، وَأُجَازِيهِ عَلَى مَا ارْتَكَبَهُ فِي حَقِّي.٢٩
30 ನಾನು ಸೋಮಾರಿಯ ಹೊಲದ ಪಕ್ಕದಲ್ಲಿ ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು.
اجْتَزْتُ فِي حَقْلِ الْكَسُولِ وَبِكَرْمِ الرَّجُلِ الْفَاقِدِ الْبَصِيرَةِ،٣٠
31 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಗಿತ್ತು.
وَإذَا بِالشَّوْكِ قَدْ كَسَاهُ، وَالْعَوْسَجِ قَدْ غَطَّى كُلَّ أَرْضِهِ، وَجِدَارِ حِجَارَتِهِ قَدِ انْهَارَ،٣١
32 ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; ನಾನು ಕಂಡದ್ದರಿಂದ ಪಾಠ ಕಲಿತೆನು.
فَاعْتَبَرَ قَلْبِي بِمَا شَاهَدْتُ، وَتَلَقَّنْتُ دَرْساً مِمَّا رَأَيْتُ.٣٢
33 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನು ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?
أَدْرَكْتُ أَنَّ قَلِيلاً مِنَ النُّعَاسِ بَعْدَ قَلِيلٍ مِنَ النَّوْمِ، وَطَيَّ الْيَدَيْنِ لِلْهُجُوعِ،٣٣
34 ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.
تَجْعَلُ الْفَقْرَ يُقْبِلُ عَلَيْكَ كَقَاطِعِ طَرِيقٍ وَالْعَوَزَ كَغَازٍ مُسَلَّحٍ!٣٤

< ಜ್ಞಾನೋಕ್ತಿಗಳು 24 >