< ಜ್ಞಾನೋಕ್ತಿಗಳು 25 >

1 ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ.
גַּם־אֵ֭לֶּה מִשְׁלֵ֣י שְׁלֹמֹ֑ה אֲשֶׁ֥ר הֶ֝עְתִּ֗יקוּ אַנְשֵׁ֤י ׀ חִזְקִיָּ֬ה מֶֽלֶךְ־יְהוּדָֽה׃
2 ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.
כְּבֹ֣ד אֱ֭לֹהִים הַסְתֵּ֣ר דָּבָ֑ר וּכְבֹ֥ד מְ֝לָכִ֗ים חֲקֹ֣ר דָּבָֽר׃
3 ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.
שָׁמַ֣יִם לָ֭רוּם וָאָ֣רֶץ לָעֹ֑מֶק וְלֵ֥ב מְ֝לָכִ֗ים אֵ֣ין חֵֽקֶר׃
4 ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು.
הָגֹ֣ו סִיגִ֣ים מִכָּ֑סֶף וַיֵּצֵ֖א לַצֹּרֵ֣ף כֶּֽלִי׃
5 ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.
הָגֹ֣ו רָ֭שָׁע לִפְנֵי־מֶ֑לֶךְ וְיִכֹּ֖ון בַּצֶּ֣דֶק כִּסְאֹֽו׃
6 ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ.
אַל־תִּתְהַדַּ֥ר לִפְנֵי־מֶ֑לֶךְ וּבִמְקֹ֥ום גְּ֝דֹלִ֗ים אַֽל־תַּעֲמֹֽד׃
7 ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. ನೀವು ಏನನ್ನೋ ಕಂಡಿದ್ದರಿಂದ,
כִּ֤י טֹ֥וב אֲמָר־לְךָ֗ עֲ‍ֽלֵ֫ה הֵ֥נָּה מֵֽ֭הַשְׁפִּ֣ילְךָ לִפְנֵ֣י נָדִ֑יב אֲשֶׁ֖ר רָא֣וּ עֵינֶֽיךָ׃
8 ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?
אַל־תֵּצֵ֥א לָרִ֗ב מַ֫הֵ֥ר פֶּ֣ן מַה־תַּ֭עֲשֶׂה בְּאַחֲרִיתָ֑הּ בְּהַכְלִ֖ים אֹתְךָ֣ רֵעֶֽךָ׃
9 ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ,
רִֽ֭יבְךָ רִ֣יב אֶת־רֵעֶ֑ךָ וְסֹ֖וד אַחֵ֣ר אַל־תְּגָֽל׃
10 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
פֶּֽן־יְחַסֶּדְךָ֥ שֹׁמֵ֑עַ וְ֝דִבָּתְךָ֗ לֹ֣א תָשֽׁוּב׃
11 ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
תַּפּוּחֵ֣י זָ֭הָב בְּמַשְׂכִּיֹּ֥ות כָּ֑סֶף דָּ֝בָ֗ר דָּבֻ֥ר עַל־אָפְנָֽיו׃
12 ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.
נֶ֣זֶם זָ֭הָב וַחֲלִי־כָ֑תֶם מֹוכִ֥יחַ חָ֝כָ֗ם עַל־אֹ֥זֶן שֹׁמָֽעַת׃
13 ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
כְּצִנַּת־שֶׁ֨לֶג ׀ בְּיֹ֬ום קָצִ֗יר צִ֣יר נֶ֭אֱמָן לְשֹׁלְחָ֑יו וְנֶ֖פֶשׁ אֲדֹנָ֣יו יָשִֽׁיב׃ פ
14 ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
נְשִׂיאִ֣ים וְ֭רוּחַ וְגֶ֣שֶׁם אָ֑יִן אִ֥ישׁ מִ֝תְהַלֵּ֗ל בְּמַתַּת־שָֽׁקֶר׃
15 ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.
בְּאֹ֣רֶךְ אַ֭פַּיִם יְפֻתֶּ֣ה קָצִ֑ין וְלָשֹׁ֥ון רַ֝כָּ֗ה תִּשְׁבָּר־גָּֽרֶם׃
16 ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.
דְּבַ֣שׁ מָ֭צָאתָ אֱכֹ֣ל דַּיֶּ֑ךָּ פֶּן־תִּ֝שְׂבָּעֶ֗נּוּ וַהֲקֵֽאתֹֽו׃
17 ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು.
הֹקַ֣ר רַ֭גְלְךָ מִבֵּ֣ית רֵעֶ֑ךָ פֶּן־יִ֝שְׂבָּעֲךָ֗ וּשְׂנֵאֶֽךָ׃
18 ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.
מֵפִ֣יץ וְ֭חֶרֶב וְחֵ֣ץ שָׁנ֑וּן אִ֥ישׁ עֹנֶ֥ה בְ֝רֵעֵ֗הוּ עֵ֣ד שָֽׁקֶר׃
19 ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
שֵׁ֣ן רֹ֭עָה וְרֶ֣גֶל מוּעָ֑דֶת מִבְטָ֥ח בֹּ֝וגֵ֗ד בְּיֹ֣ום צָרֽ͏ָה׃
20 ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ.
מַ֥עֲדֶה בֶּ֨גֶד ׀ בְּיֹ֣ום קָ֭רָה חֹ֣מֶץ עַל־נָ֑תֶר וְשָׁ֥ר בַּ֝שִּׁרִ֗ים עַ֣ל לֶב־רָֽע׃ פ
21 ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.
אִם־רָעֵ֣ב שֹׂ֭נַאֲךָ הַאֲכִלֵ֣הוּ לָ֑חֶם וְאִם־צָ֝מֵ֗א הַשְׁקֵ֥הוּ מָֽיִם׃
22 ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.
כִּ֤י גֶֽחָלִ֗ים אַ֭תָּה חֹתֶ֣ה עַל־רֹאשֹׁ֑ו וֽ͏ַ֝יהוָ֗ה יְשַׁלֶּם־לָֽךְ׃
23 ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.
ר֣וּחַ צָ֭פֹון תְּחֹ֣ולֵֽל גָּ֑שֶׁם וּפָנִ֥ים נִ֝זְעָמִ֗ים לְשֹׁ֣ון סָֽתֶר׃
24 ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
טֹ֗וב שֶׁ֥בֶת עַל־פִּנַּת־גָּ֑ג מֵאֵ֥שֶׁת מִדֹונִים (מִ֝דְיָנִ֗ים) וּבֵ֥ית חָֽבֶר׃
25 ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
מַ֣יִם קָ֭רִים עַל־נֶ֣פֶשׁ עֲיֵפָ֑ה וּשְׁמוּעָ֥ה טֹ֝ובָ֗ה מֵאֶ֥רֶץ מֶרְחָֽק׃
26 ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.
מַעְיָ֣ן נִ֭רְפָּשׂ וּמָקֹ֣ור מָשְׁחָ֑ת צַ֝דִּ֗יק מָ֣ט לִפְנֵֽי־רָשָֽׁע׃
27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.
אָ֘כֹ֤ל דְּבַ֣שׁ הַרְבֹּ֣ות לֹא־טֹ֑וב וְחֵ֖קֶר כְּבֹדָ֣ם כָּבֹֽוד׃
28 ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.
עִ֣יר פְּ֭רוּצָה אֵ֣ין חֹומָ֑ה אִ֝֗ישׁ אֲשֶׁ֤ר אֵ֖ין מַעְצָ֣ר לְרוּחֹֽו׃

< ಜ್ಞಾನೋಕ್ತಿಗಳು 25 >