< ಜ್ಞಾನೋಕ್ತಿಗಳು 26 >
1 ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ.
As dew in harvest, and as rain in summer, so honour is not [seemly] for a fool.
2 ಅಲೆದಾಡುವ ಪಕ್ಷಿಯಂತೆಯೂ, ಹಾರಾಡುವ ಬಾನಕ್ಕಿಯಂತೆಯೂ ಕಾರಣವಿಲ್ಲದೆ ಕೊಡುವ ಶಾಪವು ತಗಲದು.
As birds and sparrows fly, so a curse shall not come upon any one without a cause.
3 ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, ಮೂಢನ ಬೆನ್ನಿಗೆ ಬೆತ್ತ.
As a whip for a horse, and a goad for an ass, so [is] a rod for a simple nation.
4 ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ.
Answer not a fool according to his folly, lest you become like him.
5 ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
Yet answer a fool according to his folly, lest he seem wise in his own conceit.
6 ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ತನ್ನ ಪಾದಗಳನ್ನು ತಾನೇ ಕಡಿದುಕೊಂಡು ಇಲ್ಲವೆ ಕೇಡನ್ನು ಕುಡಿಯುತ್ತಾನೆ.
He that sends a message by a foolish messenger procures for himself a reproach from his own ways.
7 ಕುಂಟನ ಕಾಲುಗಳು ಜೋಲಾಡುವ ಹಾಗೆಯೇ, ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುತ್ತದೆ.
[As well] take away the motion of the legs, as transgression from the mouth of fools.
8 ಮೂಢನಿಗೆ ಕೊಡುವ ಮಾನವು ಕವಣಿಯಲ್ಲಿಟ್ಟ ಕಲ್ಲಿನ ಹಾಗೆ.
He that binds up a stone in a sling, is like one that gives glory to a fool.
9 ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುವುದು.
Thorns grow in the hand of a drunkard, and servitude in the hand of fools.
10 ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವ ಬಿಲ್ಲುಗಾರನಂತೆ.
All the flesh of fools endures much hardship; for their fury is brought to nothing.
11 ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
As when a dog goes to his own vomit, and becomes abominable, so is fool who returns in his wickedness to his own sin. [There is a shame that brings sin: and there is a shame [that is] glory and grace.]
12 ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.
I have seen a man who seemed to himself to be wise; but a fool had more hope than he.
13 ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಭೀಕರ ಸಿಂಹ ಇದೆ,” ಎಂದು ಹೇಳುತ್ತಾನೆ.
A sluggard when sent on a journey says, [There is] a lion in the ways, and [there are] murderers in the streets.
14 ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ.
As a door turns on the hinge, so does a sluggard on his bed.
15 ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ.
A sluggard having hid his hand in his bosom, will not be able to bring it up to his mouth.
16 ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ.
A sluggard seems to himself wiser than one who most satisfactorily brings back a message.
17 ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ.
As he that lays hold of a dog's tail, so is he that makes himself the champion of another's cause.
18 ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.
As those who need correction put forth [fair] words to men, and he that first falls in with the proposal will be overthrown;
so are all that lay wait for their own friends, and when they are discovered, say, I did it in jest.
20 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.
With much wood fire increases; but where there is not a double-minded man, strife ceases.
21 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು.
A hearth for coals, and wood for fire; and railing man for the tumult of strife.
22 ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ.
The words of cunning knaves are soft; but they strike [even] to the inmost parts of the bowels.
23 ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.
Silver dishonestly given is to be considered as a potsherd: smooth lips cover a grievous heart.
24 ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ.
A weeping enemy promises all things with his lips, but in his heart he contrives deceit.
25 ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.
Though [your] enemy entreat you with a loud voice, consent not: for there are seven abominations in his heart.
26 ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವುದು.
He that hides enmity frames deceit: but being easily discerned, exposes his own sins in the public assemblies.
27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು.
He that digs a pit for his neighbour shall fall into it: and he that rolls a stone, rolls it upon himself.
28 ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು; ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ.
A lying tongue hates the truth; and an unguarded mouth causes tumults.