< ಜ್ಞಾನೋಕ್ತಿಗಳು 27 >

1 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
אַֽל־תִּתְהַלֵּל בְּיוֹם מָחָר כִּי לֹֽא־תֵדַע מַה־יֵּלֶד יֽוֹם׃
2 ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
יְהַלֶּלְךָ זָר וְלֹא־פִיךָ נׇכְרִי וְאַל־שְׂפָתֶֽיךָ׃
3 ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ.
כֹּֽבֶד־אֶבֶן וְנֵטֶל הַחוֹל וְכַעַס אֱוִיל כָּבֵד מִשְּׁנֵיהֶֽם׃
4 ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?
אַכְזְרִיּוּת חֵמָה וְשֶׁטֶף אָף וּמִי יַעֲמֹד לִפְנֵי קִנְאָֽה׃
5 ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
טוֹבָה תּוֹכַחַת מְגֻלָּה מֵאַהֲבָה מְסֻתָּֽרֶת׃
6 ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ.
נֶאֱמָנִים פִּצְעֵי אוֹהֵב וְנַעְתָּרוֹת נְשִׁיקוֹת שׂוֹנֵֽא׃
7 ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
נֶפֶשׁ שְׂבֵעָה תָּבוּס נֹפֶת וְנֶפֶשׁ רְעֵבָה כׇּל־מַר מָתֽוֹק׃
8 ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ.
כְּצִפּוֹר נוֹדֶדֶת מִן־קִנָּהּ כֵּֽן־אִישׁ נוֹדֵד מִמְּקוֹמֽוֹ׃
9 ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.
שֶׁמֶן וּקְטֹרֶת יְשַׂמַּֽח־לֵב וּמֶתֶק רֵעֵהוּ מֵעֲצַת־נָֽפֶשׁ׃
10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
רֵעֲךָ (ורעה) [וְרֵעַ] אָבִיךָ אַֽל־תַּעֲזֹב וּבֵית אָחִיךָ אַל־תָּבוֹא בְּיוֹם אֵידֶךָ טוֹב שָׁכֵן קָרוֹב מֵאָח רָחֽוֹק׃
11 ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ, ನನ್ನ ಹೃದಯವನ್ನು ಸಂತೋಷಪಡಿಸುವಂತೆಯೂ, ನನ್ನ ಮಗುವೇ, ಜ್ಞಾನಿಯಾಗಿರು.
חֲכַם בְּנִי וְשַׂמַּח לִבִּי וְאָשִׁיבָה חֹרְפִי דָבָֽר׃
12 ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.
עָרוּם ׀ רָאָה רָעָה נִסְתָּר פְּתָאיִם עָבְרוּ נֶעֱנָֽשׁוּ׃
13 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.
קַח־בִּגְדוֹ כִּי־עָרַב זָר וּבְעַד נׇכְרִיָּה חַבְלֵֽהוּ׃
14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, ಅದು ಶಾಪವೆಂದು ಪರಿಗಣಿಸಲಾಗುವುದು.
מְבָרֵךְ רֵעֵהוּ ׀ בְּקוֹל גָּדוֹל בַּבֹּקֶר הַשְׁכֵּים קְלָלָה תֵּחָשֶׁב לֽוֹ׃
15 ಜಗಳ ಮಾಡುವ ಹೆಂಡತಿಯು ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ.
דֶּלֶף טוֹרֵד בְּיוֹם סַגְרִיר וְאֵשֶׁת (מדונים) [מִדְיָנִים] נִשְׁתָּוָֽה׃
16 ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; ಕೈಯಿಂದ ಎಣ್ಣೆಯನ್ನು ಹಿಡಿದಂತೆ.
צֹפְנֶיהָ צָפַן־רוּחַ וְשֶׁמֶן יְמִינוֹ יִקְרָֽא׃
17 ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.
בַּרְזֶל בְּבַרְזֶל יָחַד וְאִישׁ יַחַד פְּנֵֽי־רֵעֵֽהוּ׃
18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.
נֹצֵר תְּאֵנָה יֹאכַל פִּרְיָהּ וְשֹׁמֵר אֲדֹנָיו יְכֻבָּֽד׃
19 ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.
כַּמַּיִם הַפָּנִים לַפָּנִים כֵּן לֵֽב־הָאָדָם לָאָדָֽם׃
20 ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ. (Sheol h7585)
שְׁאוֹל וַאֲבַדֹּה לֹא תִשְׂבַּעְנָה וְעֵינֵי הָאָדָם לֹא תִשְׂבַּֽעְנָה׃ (Sheol h7585)
21 ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.
מַצְרֵף לַכֶּסֶף וְכוּר לַזָּהָב וְאִישׁ לְפִי מַהֲלָלֽוֹ׃
22 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.
אִם תִּכְתּֽוֹשׁ־אֶת־הָאֱוִיל ׀ בַּמַּכְתֵּשׁ בְּתוֹךְ הָרִיפוֹת בַּעֱלִי לֹא־תָסוּר מֵעָלָיו אִוַּלְתּֽוֹ׃
23 ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
יָדֹעַ תֵּדַע פְּנֵי צֹאנֶךָ שִׁית לִבְּךָ לַעֲדָרִֽים׃
24 ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.
כִּי לֹא לְעוֹלָם חֹסֶן וְאִם־נֵזֶר לְדוֹר (דור) [וָדֽוֹר]׃
25 ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ,
גָּלָה חָצִיר וְנִרְאָה־דֶשֶׁא וְנֶאֶסְפוּ עִשְּׂבוֹת הָרִֽים׃
26 ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು,
כְּבָשִׂים לִלְבוּשֶׁךָ וּמְחִיר שָׂדֶה עַתּוּדִֽים׃
27 ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ.
וְדֵי ׀ חֲלֵב עִזִּים לְֽלַחְמְךָ לְלֶחֶם בֵּיתֶךָ וְחַיִּים לְנַעֲרוֹתֶֽיךָ׃

< ಜ್ಞಾನೋಕ್ತಿಗಳು 27 >