< ಜ್ಞಾನೋಕ್ತಿಗಳು 28 >

1 ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
悪しき者は追う人もないのに逃げる、正しい人はししのように勇ましい。
2 ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.
国の罪によって、治める者は多くなり、さとく、また知識ある人によって、国はながく保つ。
3 ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
貧しい者をしえたげる貧しい人は、糧食を残さない激しい雨のようだ。
4 ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.
律法を捨てる者は悪しき者をほめる、律法を守る者はこれに敵対する。
5 ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
悪人は正しいことを悟らない、主を求める者はこれをことごとく悟る。
6 ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.
正しく歩む貧しい者は、曲った道を歩む富める者にまさる。
7 ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
律法を守る者は賢い子である、不品行な者と交わるものは、父をはずかしめる。
8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.
利息と高利とによってその富をます者は、貧しい者を恵む者のために、それをたくわえる。
9 ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.
耳をそむけて律法を聞かない者は、その祈でさえも憎まれる。
10 ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.
正しい者を悪い道に惑わす者は、みずから自分の穴に陥る、しかし誠実な人は幸福を継ぐ。
11 ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.
富める人は自分の目に自らを知恵ある者と見る、しかし悟りのある貧しい者は彼を見やぶる。
12 ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.
正しい者が勝つときは、大いなる栄えがある、悪しき者が起るときは、民は身をかくす。
13 ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
その罪を隠す者は栄えることがない、言い表わしてこれを離れる者は、あわれみをうける。
14 ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
常に主を恐れる人はさいわいである、心をかたくなにする者は災に陥る。
15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.
貧しい民を治める悪いつかさは、ほえるしし、または飢えたくまのようだ。
16 ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.
悟りのないつかさは残忍な圧制者である、不正の利を憎む者は長命を得る。
17 ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.
人を殺してその血を身に負う者は死ぬまで、のがれびとである、だれもこれを助けてはならない。
18 ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.
正しく歩む者は救を得、曲った道に歩む者は穴に陥る。
19 ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.
自分の田地を耕す者は食糧に飽き、無益な事に従う者は貧乏に飽きる。
20 ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.
忠実な人は多くの祝福を得る、急いで富を得ようとする者は罰を免れない。
21 ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.
人を片寄り見ることは良くない、人は一切れのパンのために、とがを犯すことがある。
22 ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.
欲の深い人は急いで富を得ようとする、かえって欠乏が自分の所に来ることを知らない。
23 ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
人を戒める者は舌をもってへつらう者よりも、大いなる感謝をうける。
24 ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
父や母の物を盗んで「これは罪ではない」と言う者は、滅ぼす者の友である。
25 ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.
むさぼる者は争いを起し、主に信頼する者は豊かになる。
26 ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
自分の心を頼む者は愚かである、知恵をもって歩む者は救を得る。
27 ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.
貧しい者に施す者は物に不足しない、目をおおって見ない人は多くののろいをうける。
28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.
悪しき者が起るときは、民は身をかくす、その滅びるときは、正しい人が増す。

< ಜ್ಞಾನೋಕ್ತಿಗಳು 28 >