< ಜ್ಞಾನೋಕ್ತಿಗಳು 3 >

1 ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
我が子よわが法を忘るるなかれ 汝の心にわが誡命をまもれ
2 ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.
さらば此事は汝の日をながくし生命の年を延べ平康をなんぢに加ふべし
3 ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
仁慈と眞實とを汝より離すことなかれ 之を汝の項にむすび これを汝の心の碑にしるせ
4 ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.
さらばなんぢ神と人との前に恩寵と好名とを得べし
5 ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
汝こころを盡してヱホバに倚頼め おのれの聡明に倚ることなかれ
6 ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
汝すべての途にてヱホバをみとめよ さらばなんぢの途を直くしたまふべし
7 ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.
自から看て聡明とする勿れ ヱホバを畏れて惡を離れよ
8 ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.
これ汝の身に良薬となり汝ら骨に滋潤とならん
9 ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.
汝の貨財と汝がすべての産物の初生をもてヱホバをあがめよ
10 ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.
さらば汝の倉庫はみちて余り 汝の酒醡は新しき酒にて溢れん
11 ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
我子よ汝ヱホバの懲治をかろんずる勿れ その譴責を受くるを厭ふこと勿れ
12 ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ, ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.
それヱホバはその愛する者をいましめたまふ あたかも父のその愛する子を譴むるが如し
13 ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
智慧を求め得る人および聡明をうる人は福なり
14 ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ; ಬಂಗಾರಕ್ಕಿಂತ ಹೆಚ್ಚು ಆದಾಯವನ್ನು ಕೊಡುವುದು.
そは智慧を獲るは銀を獲るに愈りその利は精金よりも善ければなり
15 ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ.
智慧は眞珠よりも尊し 汝の凡ての財貨も之と比ぶるに足らず
16 ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
其右の手には長壽あり その左の手には富と尊貴とあり
17 ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.
その途は樂しき途なり その徑すぢは悉く平康し
18 ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.
これは執る者には生命の樹なり これ持ものは福なり
19 ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು.
ヱホバ智慧をもて地をさだめ 聡明をもて天を置たまへり
20 ದೇವರು ತಮ್ಮ ಅರಿವಿನಿಂದಲೇ ಸೆಲೆಗಳು ಒಡೆದು, ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
その知識によりて海洋はわきいで 雲は露をそそぐなり
21 ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.
我が子よこれらを汝の眼より離す勿れ 聡明と謹愼とを守れ
22 ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.
然ばこれは汝り霊魂の生命となり汝の項の牧飾とならん
23 ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; ನೀನು ಎಡವದೆ ನಡೆಯುವೆ.
かくて汝やすらかに汝の途をゆかん 又なんぢの足つまづかじ
24 ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.
なんぢ臥とき怖るるところあらず 臥ときは酣く睡らん
25 ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.
なんぢ猝然なる恐懼をおそれず 惡者の滅亡きたる時も之を怖るまじ
26 ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ, ನಿನ್ನ ಪಾದವು ಉರುಲಿಗೆ ಸಿಕ್ಕದಂತೆ ಅವರು ಕಾಪಾಡುವರು.
そはヱホバは汝の倚頼むものにして汝の足を守りてとらはれしめたまはざるべければなり
27 ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ.
汝の手善をなす力あらば之を爲すべき者に爲さざること勿れ
28 ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” ಎಂದು ನಿನ್ನ ನೆರೆಯವನಿಗೆ ಹೇಳಬೇಡ.
もし汝に物あらば汝の鄰に向ひ 去て復來れ明日われ汝に予へんといふなかれ
29 ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ.
汝の鄰なんぢの傍に安らかに居らば之にむかひて惡を謀ること勿れ
30 ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ.
人もし汝に惡を爲さすば故なく之と争ふこと勿れ
31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.
暴虐人を羨むことなく そのすべての途を好とすることなかれ
32 ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.
そは邪曲なる者はヱホバに惡まるればなり されど義者はその親き者とせらるべし
33 ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.
ヱホバの呪詛は惡者の家にあり されど義者の室はかれにめぐまる
34 ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.
彼は嘲笑者をあざけり 謙る者に恩恵をあたへたまふ
35 ಜ್ಞಾನಿಗಳು ಸನ್ಮಾನಕ್ಕೆ ಬಾಧ್ಯನಾಗುವರು; ಆದರೆ ಜ್ಞಾನಹೀನರ ಪ್ರತಿಫಲವು ಅವಮಾನವೆ.
智者は尊榮をえ 愚なる者は羞辱之をとりさるべし

< ಜ್ಞಾನೋಕ್ತಿಗಳು 3 >