< ಜ್ಞಾನೋಕ್ತಿಗಳು 30 >

1 ಜಾಕೆ ಎಂಬುವನ ಮಗನಾದ ಆಗೂರನ ದೈವಿಕ ಬುದ್ಧಿಮಾತುಗಳು. ಇವನು ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು: “ದೇವರೇ, ನಾನು ದಣಿದಿದ್ದೇನೆ, ಆದರೆ ನಾನು ಜಯಶಾಲಿಯಾಗುವೆನು.
ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.
2 ಖಂಡಿತವಾಗಿಯೂ ನಾನು ಮನುಷ್ಯನಲ್ಲ, ಮೃಗ. ನನಗೆ ಮನುಷ್ಯನ ಗ್ರಹಿಕೆ ಇಲ್ಲ.
ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.
3 ನಾನು ಜ್ಞಾನವನ್ನು ಕಲಿತುಕೊಂಡಿಲ್ಲ; ಅಲ್ಲದೆ ಪರಿಶುದ್ಧ ದೇವರ ಅರಿವು ನನಗಿಲ್ಲ.
ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.
4 ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!
ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
5 “ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
6 ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.
ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
7 “ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ.
ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.
ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
9 ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.
ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
10 “ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ.
೧೦ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
11 “ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.
೧೧ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.
12 ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.
೧೨ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
13 ಅವರ ಕಣ್ಣುಗಳು ಯಾವಾಗಲೂ ಅಹಂಕಾರದಿಂದ ಕೂಡಿರುತ್ತವೆ. ಅವರ ದೃಷ್ಟಿ ಅಸಹ್ಯವಾಗಿದೆ.
೧೩ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.
14 ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.
೧೪ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
15 “ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳುಂಟು. “ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ, ಹೌದು, ‘ಸಾಕು!’ ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ:
೧೫ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
16 ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, ‘ಸಾಕು!’ ಎಂದು ಹೇಳದಿರುವ ಬೆಂಕಿ. (Sheol h7585)
೧೬ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ. (Sheol h7585)
17 “ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.
೧೭ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
18 “ನನಗೆ ಆಶ್ಚರ್ಯವಾದ ಮೂರು ಸಂಗತಿಗಳಿವೆ, ಹೌದು, ನನಗೆ ಅರ್ಥವಾಗದಿರುವ ನಾಲ್ಕು ಸಂಗತಿಗಳಿವೆ:
೧೮ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;
19 ಆಕಾಶದಲ್ಲಿ ಹದ್ದಿನ ಮಾರ್ಗ, ಬಂಡೆಯ ಮೇಲೆ ಸರ್ಪದ ಮಾರ್ಗ, ಸಮುದ್ರ ನಡುವೆ ಹಡಗಿನ ಮಾರ್ಗ, ಯುವಕ ಯುವತಿಯರ ಪ್ರೀತಿ ಮಾರ್ಗ.
೧೯ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
20 “ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.
೨೦ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
21 “ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ, ನಾಲ್ವರನ್ನು ಅದು ತಾಳಲಾರದು:
೨೧ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
22 ಅರಸನಾಗುವ ದಾಸನು, ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು,
೨೨ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
23 ತಿರಸ್ಕಾರಕ್ಕೆ ಅರ್ಹಳಾದ ಮಹಿಳೆ, ಮದುವೆಯಾಗುವುದು. ಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.
೨೩ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
24 “ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ:
೨೪ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25 ಇರುವೆಗಳು ಬಲಹೀನ ಜೀವಿಗಳು, ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
೨೫ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
26 ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ.
೨೬ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
27 ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
೨೭ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
28 ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ ಅರಸನ ಅರಮನೆಗಳಲ್ಲಿ ಕಂಡುಬರುತ್ತವೆ.
೨೮ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
29 “ಗಂಭೀರ ಗಮನದ ಮೂರು ಪ್ರಾಣಿಗಳಿವೆ, ಹೌದು, ಗಂಭೀರ ಗತಿಯ ನಾಲ್ಕಿವೆ:
೨೯ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
30 ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು.
೩೦ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
31 ಕತ್ತೆತ್ತಿ ನಡೆಯುವ ಹುಂಜ, ಹೋತವು, ತನ್ನ ಸುತ್ತಲೂ ಸೈನಿಕರಿರುವ ಅರಸನು.
೩೧ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.
32 “ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ.
೩೨ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.
33 ಹಾಲನ್ನು ಕಡೆಯುವುದರಿಂದ ಬೆಣ್ಣೆ, ಮೂಗನ್ನು ಹಿಂಡುವುದರಿಂದ ರಕ್ತ, ಹಾಗೆಯೇ ಕೋಪವನ್ನೆಬ್ಬಿಸುವುದರಿಂದ ಜಗಳ.”
೩೩ಹಾಲು ಕಡೆಯುವುದರಿಂದ ಬೆಣ್ಣೆ, ಮೂಗು ಹಿಂಡುವುದರಿಂದ ರಕ್ತ, ಕೋಪಕಲಕುವುದರಿಂದ ಜಗಳ.

< ಜ್ಞಾನೋಕ್ತಿಗಳು 30 >