< ಜ್ಞಾನೋಕ್ತಿಗಳು 6 >

1 ಮಗನೇ, ನಿನ್ನ ನೆರೆಯವನಿಗೆ ನೀನು ಹೊಣೆಯಾಗಿದ್ದರೆ, ಪರನಿಗಾಗಿ ನಿನ್ನ ಕೈಯನ್ನು ಒಡ್ಡಿದ್ದರೆ,
我儿,你若为朋友作保, 替外人击掌,
2 ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.
你就被口中的话语缠住, 被嘴里的言语捉住。
3 ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ.
我儿,你既落在朋友手中, 就当这样行才可救自己: 你要自卑,去恳求你的朋友。
4 ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
不要容你的眼睛睡觉; 不要容你的眼皮打盹。
5 ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.
要救自己,如鹿脱离猎户的手, 如鸟脱离捕鸟人的手。
6 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.
懒惰人哪, 你去察看蚂蚁的动作就可得智慧。
7 ನಾಯಕನಾಗಲೀ, ಮೇಲ್ವಿಚಾರಕನಾಗಲೀ, ಅಧಿಕಾರಿಯಾಗಲೀ ಇರುವೆಗೆ ಇಲ್ಲದೆ ಹೋದರೂ,
蚂蚁没有元帅, 没有官长,没有君王,
8 ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.
尚且在夏天预备食物, 在收割时聚敛粮食。
9 ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು? ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?
懒惰人哪,你要睡到几时呢? 你何时睡醒呢?
10 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?
再睡片时,打盹片时, 抱着手躺卧片时,
11 ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.
你的贫穷就必如强盗速来, 你的缺乏仿佛拿兵器的人来到。
12 ತೊಂದರೆಕೊಡುವವನೂ ಕೆಡುಕನೂ ಆಗಿರುವವನ ಬಾಯಿಂದ ಕುಟಿಲ ಮಾತೇ ಬರುವುದು.
无赖的恶徒, 行动就用乖僻的口,
13 ಅವನು ಕಣ್ಣು ಮಿಟುಕಿಸುತ್ತಾನೆ, ಕಾಲು ಕೆರೆಯುತ್ತಾನೆ, ಬೆರಳು ಸನ್ನೆಮಾಡುತ್ತಾನೆ,
用眼传神, 用脚示意, 用指点划,
14 ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ.
心中乖僻, 常设恶谋, 布散纷争。
15 ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.
所以,灾难必忽然临到他身; 他必顷刻败坏,无法可治。
16 ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:
耶和华所恨恶的有六样, 连他心所憎恶的共有七样:
17 ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,
就是高傲的眼, 撒谎的舌, 流无辜人血的手,
18 ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ನುಗ್ಗಲು ತ್ವರೆಪಡುವ ಕಾಲುಗಳು,
图谋恶计的心, 飞跑行恶的脚,
19 ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.
吐谎言的假见证, 并弟兄中布散纷争的人。
20 ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು, ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.
我儿,要谨守你父亲的诫命; 不可离弃你母亲的法则,
21 ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.
要常系在你心上, 挂在你项上。
22 ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.
你行走,它必引导你; 你躺卧,它必保守你; 你睡醒,它必与你谈论。
23 ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.
因为诫命是灯,法则是光, 训诲的责备是生命的道,
24 ಅವು ಕೆಟ್ಟ ಹೆಂಗಸಿನಿಂದಲೂ, ಪರಸ್ತ್ರೀಯ ವಂಚಕ ಮಾತಿನಿಂದಲೂ ನಿನ್ನನ್ನು ತಪ್ಪಿಸಿ ಕಾಪಾಡಬಲ್ಲವು.
能保你远离恶妇, 远离外女谄媚的舌头。
25 ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.
你心中不要恋慕她的美色, 也不要被她眼皮勾引。
26 ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು.
因为,妓女能使人只剩一块饼; 淫妇猎取人宝贵的生命。
27 ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, ಅವನ ವಸ್ತ್ರಗಳು ಸುಡುವುದಿಲ್ಲವೋ?
人若怀里搋火, 衣服岂能不烧呢?
28 ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ, ಅವನ ಪಾದಗಳು ಸುಡುವುದಿಲ್ಲವೋ?
人若在火炭上走, 脚岂能不烫呢?
29 ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.
亲近邻舍之妻的,也是如此; 凡挨近她的,不免受罚。
30 ಹಸಿದಾಗ ಕಳ್ಳನು ತನ್ನ ಹಸಿವೆಯನ್ನು ತೃಪ್ತಿಪಡಿಸಲು ಕಳವು ಮಾಡಿದರೆ, ಜನರು ಅವನನ್ನು ಹೀಯಾಳಿಸುವುದಿಲ್ಲ.
贼因饥饿偷窃充饥, 人不藐视他,
31 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು.
若被找着,他必赔还七倍, 必将家中所有的尽都偿还。
32 ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.
与妇人行淫的,便是无知; 行这事的,必丧掉生命。
33 ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು.
他必受伤损,必被凌辱; 他的羞耻不得涂抹。
34 ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.
因为人的嫉恨成了烈怒, 报仇的时候决不留情。
35 ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ; ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು.
什么赎价,他都不顾; 你虽送许多礼物,他也不肯干休。

< ಜ್ಞಾನೋಕ್ತಿಗಳು 6 >