< ಜ್ಞಾನೋಕ್ತಿಗಳು 8 >
1 ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?
智慧豈不呼叫? 聰明豈不發聲?
2 ಉನ್ನತ ಸ್ಥಳಗಳ ತುದಿಯಲ್ಲಿಯೂ, ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ.
她在道旁高處的頂上, 在十字路口站立,
3 ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ,
在城門旁,在城門口, 在城門洞,大聲說:
4 “ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ.
眾人哪,我呼叫你們, 我向世人發聲。
5 ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ.
說:愚蒙人哪,你們要會悟靈明; 愚昧人哪,你們當心裏明白。
6 ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು.
你們當聽,因我要說極美的話; 我張嘴要論正直的事。
7 ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
我的口要發出真理; 我的嘴憎惡邪惡。
8 ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
我口中的言語都是公義, 並無彎曲乖僻。
9 ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು.
有聰明的,以為明顯, 得知識的,以為正直。
10 ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.
你們當受我的教訓,不受白銀; 寧得知識,勝過黃金。
11 ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.
因為智慧比珍珠更美; 一切可喜愛的都不足與比較。
12 “ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ.
我-智慧以靈明為居所, 又尋得知識和謀略。
13 ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.
敬畏耶和華在乎恨惡邪惡; 那驕傲、狂妄,並惡道, 以及乖謬的口,都為我所恨惡。
14 ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.
我有謀略和真知識; 我乃聰明,我有能力。
15 ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು.
帝王藉我坐國位; 君王藉我定公平。
16 ನನ್ನಿಂದ ಅಧಿಪತಿಗಳು ಆಳುತ್ತಾರೆ, ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು.
王子和首領, 世上一切的審判官,都是藉我掌權。
17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
愛我的,我也愛他; 懇切尋求我的,必尋得見。
18 ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.
豐富尊榮在我; 恆久的財並公義也在我。
19 ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ.
我的果實勝過黃金,強如精金; 我的出產超乎高銀。
20 ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.
我在公義的道上走, 在公平的路中行,
21 ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು.
使愛我的,承受貨財, 並充滿他們的府庫。
22 “ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು;
在耶和華造化的起頭, 在太初創造萬物之先,就有了我。
23 ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು.
從亙古,從太初, 未有世界以前,我已被立。
24 ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು.
沒有深淵, 沒有大水的泉源,我已生出。
25 ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು.
大山未曾奠定, 小山未有之先,我已生出。
26 ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು.
耶和華還沒有創造大地和田野, 並世上的土質,我已生出。
27 ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ ಸಾಗರದ ಮೇಲೆ ಚಕ್ರವನ್ನು ಹಾಕಿದಾಗ,
他立高天,我在那裏; 他在淵面的周圍,劃出圓圈。
28 ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ,
上使穹蒼堅硬, 下使淵源穩固,
29 ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು.
為滄海定出界限,使水不越過他的命令, 立定大地的根基。
30 ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ ಅವರ ಹತ್ತಿರ ಇದ್ದೆನು. ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು.
那時,我在他那裏為工師, 日日為他所喜愛, 常常在他面前踴躍,
31 ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು.
踴躍在他為人預備可住之地, 也喜悅住在世人之間。
32 “ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
眾子啊,現在要聽從我, 因為謹守我道的,便為有福。
33 ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; ಅದನ್ನು ನೀವು ತಿರಸ್ಕರಿಸಬೇಡಿರಿ.
要聽教訓就得智慧, 不可棄絕。
34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.
聽從我、日日在我門口仰望、 在我門框旁邊等候的,那人便為有福。
35 ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.
因為尋得我的,就尋得生命, 也必蒙耶和華的恩惠。
36 ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”
得罪我的,卻害了自己的性命; 恨惡我的,都喜愛死亡。