< ಕೀರ್ತನೆಗಳು 10 >

1 ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?
למה יהוה תעמד ברחוק תעלים לעתות בצרה
2 ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.
בגאות רשע ידלק עני יתפשו במזמות זו חשבו
3 ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.
כי-הלל רשע על-תאות נפשו ובצע ברך נאץ יהוה
4 ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.
רשע--כגבה אפו בל-ידרש אין אלהים כל-מזמותיו
5 ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.
יחילו דרכו בכל-עת--מרום משפטיך מנגדו כל-צורריו יפיח בהם
6 ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”
אמר בלבו בל-אמוט לדר ודר אשר לא-ברע
7 ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.
אלה פיהו מלא--ומרמות ותך תחת לשונו עמל ואון
8 ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;
ישב במארב חצרים--במסתרים יהרג נקי עיניו לחלכה יצפנו
9 ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.
יארב במסתר כאריה בסכה-- יארב לחטוף עני יחטף עני במשכו ברשתו
10 ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ.
ודכה (ידכה) ישח ונפל בעצומיו חלכאים (חל כאים)
11 “ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.
אמר בלבו שכח אל הסתיר פניו בל-ראה לנצח
12 ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.
קומה יהוה--אל נשא ידך אל-תשכח עניים (ענוים)
13 ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?
על-מה נאץ רשע אלהים אמר בלבו לא תדרש
14 ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.
ראתה כי-אתה עמל וכעס תביט-- לתת בידך עליך יעזב חלכה יתום אתה היית עוזר
15 ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.
שבר זרוע רשע ורע תדרוש-רשעו בל-תמצא
16 ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.
יהוה מלך עולם ועד אבדו גוים מארצו
17 ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.
תאות ענוים שמעת יהוה תכין לבם תקשיב אזנך
18 ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.
לשפט יתום ודך בל-יוסיף עוד--לערץ אנוש מן-הארץ

< ಕೀರ್ತನೆಗಳು 10 >