< ಕೀರ್ತನೆಗಳು 102 >

1 ದುಃಖಿತನಾಗಿ ಯೆಹೋವ ದೇವರ ಮುಂದೆ ತನ್ನ ಚಿಂತೆಗಳನ್ನು ಹೇಳಿಕೊಳ್ಳುವ ಬಾಧಿತನ ಪ್ರಾರ್ಥನೆ. ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಯು ನಿಮಗೆ ಮುಟ್ಟಲಿ.
תְּ֭פִלָּה לְעָנִ֣י כִֽי־יַעֲטֹ֑ף וְלִפְנֵ֥י יְ֝הוָ֗ה יִשְׁפֹּ֥ךְ שִׂיחֽוֹ׃ יְ֭הוָה שִׁמְעָ֣ה תְפִלָּתִ֑י וְ֝שַׁוְעָתִ֗י אֵלֶ֥יךָ תָבֽוֹא׃
2 ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ, ಸಹಾಯಮಾಡಿರಿ; ನಾನು ಕರೆಯುವಾಗ ನನ್ನ ಕಡೆಗೆ ತಿರುಗಿರಿ, ಬೇಗನೇ ನನಗೆ ಉತ್ತರಕೊಡಿರಿ.
אַל־תַּסְתֵּ֬ר פָּנֶ֨יךָ ׀ מִמֶּנִּי֮ בְּי֪וֹם צַ֫ר לִ֥י הַטֵּֽה־אֵלַ֥י אָזְנֶ֑ךָ בְּי֥וֹם אֶ֝קְרָ֗א מַהֵ֥ר עֲנֵֽנִי׃
3 ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ; ನನ್ನ ಎಲುಬುಗಳು ಬೂದಿ ಮುಚ್ಚಿದ ಕೆಂಡದಂತೆ ಸುಟ್ಟುಹೋಗಿವೆ.
כִּֽי־כָל֣וּ בְעָשָׁ֣ן יָמָ֑י וְ֝עַצְמוֹתַ֗י כְּמוֹ־קֵ֥ד נִחָֽרוּ׃
4 ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.
הוּכָּֽה־כָ֭עֵשֶׂב וַיִּבַ֣שׁ לִבִּ֑י כִּֽי־שָׁ֝כַ֗חְתִּי מֵאֲכֹ֥ל לַחְמִֽי׃
5 ನಾನು ನನ್ನ ನಿಟ್ಟುಸಿರಿನಿಂದ ಮೊರೆಯಿಡುತ್ತಿದ್ದೇನೆ. ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.
מִקּ֥וֹל אַנְחָתִ֑י דָּבְקָ֥ה עַ֝צְמִ֗י לִבְשָׂרִֽי׃
6 ನಾನು ಅರಣ್ಯದ ಗೂಬೆಗೆ ಸಮಾನನಾಗಿದ್ದೇನೆ; ನಾನು ಹಾಳೂರಿನ ಗೂಬೆಯ ಹಾಗಿದ್ದೇನೆ.
דָּ֭מִיתִי לִקְאַ֣ת מִדְבָּ֑ר הָ֝יִ֗יתִי כְּכ֣וֹס חֳרָבֽוֹת׃
7 ನಿದ್ರೆಯಿಲ್ಲದೆ ಬಳಲುತ್ತಿದ್ದೇನೆ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
שָׁקַ֥דְתִּי וָאֶֽהְיֶ֑ה כְּ֝צִפּ֗וֹר בּוֹדֵ֥ד עַל־גָּֽג׃
8 ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರೆಲ್ಲರು ನನಗೆ ವಿರೋಧವಾಗಿ ಶಪಿಸುತ್ತಾರೆ.
כָּל־הַ֭יּוֹם חֵרְפ֣וּנִי אוֹיְבָ֑י מְ֝הוֹלָלַ֗י בִּ֣י נִשְׁבָּֽעוּ׃
9 ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.
כִּי־אֵ֭פֶר כַּלֶּ֣חֶם אָכָ֑לְתִּי וְ֝שִׁקֻּוַ֗י בִּבְכִ֥י מָסָֽכְתִּי׃
10 ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ. ನೀವು ನನಗೆ ಲಕ್ಷ್ಯಕೊಡುತ್ತಾಯಿಲ್ಲ.
מִפְּנֵֽי־זַֽעַמְךָ֥ וְקִצְפֶּ֑ךָ כִּ֥י נְ֝שָׂאתַ֗נִי וַתַּשְׁלִיכֵֽנִי׃
11 ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.
יָ֭מַי כְּצֵ֣ל נָט֑וּי וַ֝אֲנִ֗י כָּעֵ֥שֶׂב אִיבָֽשׁ׃
12 ಆದರೆ ನೀವು ಯೆಹೋವ ದೇವರೇ, ಎಂದೆಂದಿಗೂ ಇರುತ್ತೀರಿ; ನಿಮ್ಮ ಪ್ರಸಿದ್ಧ ಕಾರ್ಯಗಳು ತಲತಲಾಂತರಕ್ಕೂ ಇರುತ್ತವೆ.
וְאַתָּ֣ה יְ֭הוָה לְעוֹלָ֣ם תֵּשֵׁ֑ב וְ֝זִכְרְךָ֗ לְדֹ֣ר וָדֹֽר׃
13 ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.
אַתָּ֣ה תָ֭קוּם תְּרַחֵ֣ם צִיּ֑וֹן כִּי־עֵ֥ת לְ֝חֶֽנְנָ֗הּ כִּי־בָ֥א מוֹעֵֽד׃
14 ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.
כִּֽי־רָצ֣וּ עֲ֭בָדֶיךָ אֶת־אֲבָנֶ֑יהָ וְֽאֶת־עֲפָרָ֥הּ יְחֹנֵֽנוּ׃
15 ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.
וְיִֽירְא֣וּ ג֭וֹיִם אֶת־שֵׁ֣ם יְהוָ֑ה וְֽכָל־מַלְכֵ֥י הָ֝אָ֗רֶץ אֶת־כְּבוֹדֶֽךָ׃
16 ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.
כִּֽי־בָנָ֣ה יְהוָ֣ה צִיּ֑וֹן נִ֝רְאָ֗ה בִּכְבוֹדֽוֹ׃
17 ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.
פָּ֭נָה אֶל־תְּפִלַּ֣ת הָעַרְעָ֑ר וְלֹֽא־בָ֝זָ֗ה אֶת־תְּפִלָּתָֽם׃
18 ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.
תִּכָּ֣תֶב זֹ֭את לְד֣וֹר אַחֲר֑וֹן וְעַ֥ם נִ֝בְרָ֗א יְהַלֶּל־יָֽהּ׃
19 ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ; ಅವರು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾರೆ.
כִּֽי־הִ֭שְׁקִיף מִמְּר֣וֹם קָדְשׁ֑וֹ יְ֝הוָ֗ה מִשָּׁמַ֤יִם ׀ אֶל־אֶ֬רֶץ הִבִּֽיט׃
20 ಅವರು ಸೆರೆಯವರ ಗೋಳಾಟವನ್ನು ಕೇಳಿ, ಮರಣದಂಡನೆಗೆ ಪಾತ್ರನಾದವರನ್ನು ಬಿಡಿಸುವರು,
לִ֭שְׁמֹעַ אֶנְקַ֣ת אָסִ֑יר לְ֝פַתֵּ֗חַ בְּנֵ֣י תְמוּתָֽה׃
21 ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ.
לְסַפֵּ֣ר בְּ֭צִיּוֹן שֵׁ֣ם יְהוָ֑ה וּ֝תְהִלָּת֗וֹ בִּירוּשָׁלִָֽם׃
22 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು.
בְּהִקָּבֵ֣ץ עַמִּ֣ים יַחְדָּ֑ו וּ֝מַמְלָכ֗וֹת לַעֲבֹ֥ד אֶת־יְהוָֽה׃
23 ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ, ನನ್ನ ದಿನಗಳನ್ನೂ ಕಡಿಮೆ ಮಾಡಿದ್ದಾರೆ.
עִנָּ֖ה בַדֶּ֥רֶךְ כֹּחִ֗י קִצַּ֥ר יָמָֽי׃
24 ಆದ್ದರಿಂದ ನಾನು, “ನನ್ನ ದೇವರೇ, ನನ್ನ ಆಯುಷ್ಯದ ಮಧ್ಯದಲ್ಲಿ ನನ್ನನ್ನು ತೆಗೆದುಕೊಳ್ಳಬೇಡಿರಿ; ನಿಮ್ಮ ವರ್ಷಗಳು ತಲತಲಾಂತರಗಳಿಗೂ ಇವೆ.
אֹמַ֗ר אֵלִ֗י אַֽל־תַּ֭עֲלֵנִי בַּחֲצִ֣י יָמָ֑י בְּד֖וֹר דּוֹרִ֣ים שְׁנוֹתֶֽיךָ׃
25 ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.
לְ֭פָנִים הָאָ֣רֶץ יָסַ֑דְתָּ וּֽמַעֲשֵׂ֖ה יָדֶ֣יךָ שָׁמָֽיִם׃
26 ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವುಗಳೆಲ್ಲಾ ವಸ್ತ್ರದ ಹಾಗೆ ಹಳೆಯದಾಗುವುದು; ಅಂಗಿಯ ಹಾಗೆ ಅವುಗಳನ್ನು ಬದಲಾಯಿಸುವಿರಿ; ಅವು ತೆಗೆದುಹಾಕಲಾಗುವುದು.
הֵ֤מָּה ׀ יֹאבֵדוּ֮ וְאַתָּ֪ה תַ֫עֲמֹ֥ד וְ֭כֻלָּם כַּבֶּ֣גֶד יִבְל֑וּ כַּלְּב֖וּשׁ תַּחֲלִיפֵ֣ם וְֽיַחֲלֹֽפוּ׃
27 ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ.
וְאַתָּה־ה֑וּא וּ֝שְׁנוֹתֶ֗יךָ לֹ֣א יִתָּֽמּוּ׃
28 ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು; ಅವರ ಸಂತತಿಯು ನಿಮ್ಮ ಮುಂದೆ ನೆಲೆಯಾಗಿರುವುದು.”
בְּנֵֽי־עֲבָדֶ֥יךָ יִשְׁכּ֑וֹנוּ וְ֝זַרְעָ֗ם לְפָנֶ֥יךָ יִכּֽוֹן׃

< ಕೀರ್ತನೆಗಳು 102 >