< ಕೀರ್ತನೆಗಳು 104 >

1 ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.
בָּרְכִי נַפְשִׁי אֶת־יְהֹוָה יְהֹוָה אֱלֹהַי גָּדַלְתָּ מְּאֹד הוֹד וְהָדָר לָבָֽשְׁתָּ׃
2 ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.
עֹֽטֶה־אוֹר כַּשַּׂלְמָה נוֹטֶה שָׁמַיִם כַּיְרִיעָֽה׃
3 ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.
הַמְקָרֶה בַמַּיִם עֲֽלִיּוֹתָיו הַשָּׂם־עָבִים רְכוּבוֹ הַֽמְהַלֵּךְ עַל־כַּנְפֵי־רֽוּחַ׃
4 ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ.
עֹשֶׂה מַלְאָכָיו רוּחוֹת מְשָׁרְתָיו אֵשׁ לֹהֵֽט׃
5 ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.
יָֽסַד־אֶרֶץ עַל־מְכוֹנֶיהָ בַּל־תִּמּוֹט עוֹלָם וָעֶֽד׃
6 ಜಲಗಾಧವು ವಸ್ತ್ರದ ಹಾಗೆ ಅದನ್ನು ಮುಚ್ಚಿದೆ; ಬೆಟ್ಟಗಳ ಮೇಲೆ ಜಲರಾಶಿಗಳು ನಿಂತವು.
תְּהוֹם כַּלְּבוּשׁ כִּסִּיתוֹ עַל־הָרִים יַעַמְדוּ מָֽיִם׃
7 ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು.
מִן־גַּעֲרָתְךָ יְנוּסוּן מִן־קוֹל רַֽעַמְךָ יֵחָפֵזֽוּן׃
8 ಜಲರಾಶಿಗಳು ಬೆಟ್ಟಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀವು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.
יַעֲלוּ הָרִים יֵרְדוּ בְקָעוֹת אֶל־מְקוֹם זֶה ׀ יָסַדְתָּ לָהֶֽם׃
9 ಅವು ದಾಟದ ಹಾಗೆಯೂ, ಭೂಮಿಯನ್ನು ಮುಚ್ಚುವುದಕ್ಕೆ ತಿರುಗಿ ಬಾರದ ಹಾಗೆಯೂ ನೀವು ಮೇರೆಯನ್ನು ಇಟ್ಟಿದ್ದೀರಿ.
גְּֽבוּל־שַׂמְתָּ בַּל־יַעֲבֹרוּן בַּל־יְשֻׁבוּן לְכַסּוֹת הָאָֽרֶץ׃
10 ಬುಗ್ಗೆಗಳನ್ನು ಹಳ್ಳಗಳಿಗೆ ಕಳುಹಿಸುತ್ತೀರಿ. ಅವು ಬೆಟ್ಟಗಳ ನಡುವೆ ಹರಿಯುತ್ತವೆ.
הַֽמְשַׁלֵּחַ מַעְיָנִים בַּנְּחָלִים בֵּין הָרִים יְהַלֵּכֽוּן׃
11 ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
יַשְׁקוּ כׇּל־חַיְתוֹ שָׂדָי יִשְׁבְּרוּ פְרָאִים צְמָאָֽם׃
12 ಆಕಾಶದ ಪಕ್ಷಿಗಳು, ಅವುಗಳ ಹತ್ತಿರ ವಾಸವಾಗಿದ್ದು, ಕೊಂಬೆಗಳ ಮಧ್ಯದಲ್ಲಿಂದ ಹಾಡುತ್ತವೆ.
עֲלֵיהֶם עוֹף־הַשָּׁמַיִם יִשְׁכּוֹן מִבֵּין עֳפָאיִם יִתְּנוּ־קֽוֹל׃
13 ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ. ಅವರ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
מַשְׁקֶה הָרִים מֵעֲלִיּוֹתָיו מִפְּרִי מַעֲשֶׂיךָ תִּשְׂבַּע הָאָֽרֶץ׃
14 ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.
מַצְמִיחַ חָצִיר ׀ לַבְּהֵמָה וְעֵשֶׂב לַעֲבֹדַת הָאָדָם לְהוֹצִיא לֶחֶם מִן־הָאָֽרֶץ׃
15 ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.
וְיַיִן ׀ יְשַׂמַּח לְֽבַב־אֱנוֹשׁ לְהַצְהִיל פָּנִים מִשָּׁמֶן וְלֶחֶם לְֽבַב־אֱנוֹשׁ יִסְעָֽד׃
16 ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.
יִשְׂבְּעוּ עֲצֵי יְהֹוָה אַֽרְזֵי לְבָנוֹן אֲשֶׁר נָטָֽע׃
17 ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ತುರಾಯಿ ಗಿಡಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
אֲשֶׁר־שָׁם צִפֳּרִים יְקַנֵּנוּ חֲסִידָה בְּרוֹשִׁים בֵּיתָֽהּ׃
18 ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ.
הָרִים הַגְּבֹהִים לַיְּעֵלִים סְלָעִים מַחְסֶה לַֽשְׁפַנִּֽים׃
19 ದೇವರೇ, ಕಾಲಗಳ ಸೂಚನೆಗಾಗಿ ಚಂದ್ರನನ್ನು ಸೃಷ್ಟಿಸಿದ್ದೀರಿ, ಸೂರ್ಯನು ತನ್ನ ಅಸ್ತಮಾನವನ್ನು ತಿಳಿದಿದ್ದಾನೆ.
עָשָׂה יָרֵחַ לְמוֹעֲדִים שֶׁמֶשׁ יָדַע מְבוֹאֽוֹ׃
20 ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗಗಳೆಲ್ಲಾ ಸಂಚರಿಸುತ್ತವೆ.
תָּֽשֶׁת־חֹשֶׁךְ וִיהִי לָיְלָה בּוֹ־תִרְמֹשׂ כׇּל־חַיְתוֹ־יָֽעַר׃
21 ಸಿಂಹದ ಮರಿಗಳು ಬೇಟೆಗೋಸ್ಕರವೂ, ದೇವರಿಂದ ತಮ್ಮ ಆಹಾರವನ್ನು ಹುಡುಕುವುದಕ್ಕೋಸ್ಕರವೂ ಗರ್ಜಿಸುತ್ತವೆ.
הַכְּפִירִים שֹׁאֲגִים לַטָּרֶף וּלְבַקֵּשׁ מֵאֵל אׇכְלָֽם׃
22 ಸೂರ್ಯೋದಯವಾಗಲು ಅವು ಕೂಡಿಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
תִּזְרַח הַשֶּׁמֶשׁ יֵאָסֵפוּן וְאֶל־מְעוֹנֹתָם יִרְבָּצֽוּן׃
23 ಮನುಷ್ಯನು ತನ್ನ ಕೆಲಸಕ್ಕೆ ಹೊರಟುಹೋಗಿ ಸಾಯಂಕಾಲದವರೆಗೆ ದುಡಿಯುತ್ತಾನೆ.
יֵצֵא אָדָם לְפׇעֳלוֹ וְֽלַעֲבֹדָתוֹ עֲדֵי־עָֽרֶב׃
24 ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟುಮಾಡಿದ್ದೀರಿ, ಭೂಮಿಯು ನಿಮ್ಮ ಸಂಪತ್ತಿನಿಂದ ತುಂಬಿದೆ.
מָה־רַבּוּ מַעֲשֶׂיךָ ׀ יְֽהֹוָה כֻּלָּם בְּחׇכְמָה עָשִׂיתָ מָלְאָה הָאָרֶץ קִנְיָנֶֽךָ׃
25 ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ; ಅದರಲ್ಲಿ ಲೆಕ್ಕವಿಲ್ಲದಷ್ಟು ಜೀವಜಂತುಗಳೂ, ಸಣ್ಣ ದೊಡ್ಡ ಜಲಚರಗಳೂ ಇವೆ.
זֶה ׀ הַיָּם גָּדוֹל וּרְחַב יָדָיִם שָֽׁם־רֶמֶשׂ וְאֵין מִסְפָּר חַיּוֹת קְטַנּוֹת עִם־גְּדֹלֽוֹת׃
26 ಅದರಲ್ಲಿ ಹಡಗುಗಳು ಹೋಗುತ್ತವೆ; ಅದರಲ್ಲಿ ಆಡುವುದಕ್ಕೆ ನೀವು ರೂಪಿಸಿದ ಲಿವ್ಯಾತಾನ ತಿಮಿಂಗಲವು ಇದೆ.
שָׁם אֳנִיּוֹת יְהַלֵּכוּן לִוְיָתָן זֶֽה־יָצַרְתָּ לְשַֽׂחֶק־בּֽוֹ׃
27 ದೇವರೇ, ನೀವು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವ ಹಾಗೆ, ಅವುಗಳೆಲ್ಲಾ ನಿಮ್ಮನ್ನು ಕಾದುಕೊಂಡಿರುತ್ತವೆ.
כֻּלָּם אֵלֶיךָ יְשַׂבֵּרוּן לָתֵת אׇכְלָם בְּעִתּֽוֹ׃
28 ನೀವು ಅವುಗಳಿಗೆ ಕೊಡಲು ಅವು ಕೂಡಿ ಬರುತ್ತವೆ; ನೀವು ನಿಮ್ಮ ಕೈ ತೆರೆಯಲು, ಒಳ್ಳೆಯವುಗಳಿಂದ ತೃಪ್ತಿ ಹೊಂದುತ್ತವೆ.
תִּתֵּן לָהֶם יִלְקֹטוּן תִּפְתַּח יָדְךָ יִשְׂבְּעוּן טֽוֹב׃
29 ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.
תַּסְתִּיר פָּנֶיךָ יִֽבָּהֵלוּן תֹּסֵף רוּחָם יִגְוָעוּן וְֽאֶל־עֲפָרָם יְשׁוּבֽוּן׃
30 ನೀವು ನಿಮ್ಮ ಶ್ವಾಸವನ್ನು ಕಳುಹಿಸಲು, ಜೀವಜಂತುಗಳು ಹುಟ್ಟುತ್ತವೆ; ಹೀಗೆ ನೀವು ಭೂಮಿಯನ್ನು ನೂತನಗೊಳಿಸುತ್ತೀರಿ.
תְּשַׁלַּח רוּחֲךָ יִבָּרֵאוּן וּתְחַדֵּשׁ פְּנֵי אֲדָמָֽה׃
31 ಯೆಹೋವ ದೇವರ ಮಹಿಮೆಯು ಯುಗಯುಗಕ್ಕೂ ಇರಲಿ; ಯೆಹೋವ ದೇವರು ತಮ್ಮ ಕೆಲಸಗಳಲ್ಲಿ ಸಂತೋಷಪಡಲಿ.
יְהִי כְבוֹד יְהֹוָה לְעוֹלָם יִשְׂמַח יְהֹוָה בְּמַעֲשָֽׂיו׃
32 ಅವರು ಭೂಮಿಯನ್ನು ದೃಷ್ಟಿಸಲು, ಅದು ನಡುಗುತ್ತದೆ; ಬೆಟ್ಟಗಳನ್ನು ಮುಟ್ಟಲು, ಅವು ಹೊಗೆ ಹಾಯುತ್ತವೆ.
הַמַּבִּיט לָאָרֶץ וַתִּרְעָד יִגַּע בֶּהָרִים וְֽיֶעֱשָֽׁנוּ׃
33 ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು. ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.
אָשִׁירָה לַיהֹוָה בְּחַיָּי אֲזַמְּרָה לֵאלֹהַי בְּעוֹדִֽי׃
34 ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.
יֶעֱרַב עָלָיו שִׂיחִי אָנֹכִי אֶשְׂמַח בַּיהֹוָֽה׃
35 ಪಾಪಿಗಳು ಭೂಮಿಯೊಳಗಿಂದ ಮುಗಿದು ಹೋಗಲಿ; ದುಷ್ಟರು ಇಲ್ಲದೆ ಹೋಗಲಿ. ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ಯೆಹೋವ ದೇವರಿಗೆ ಸ್ತೋತ್ರವಾಗಲಿ.
יִתַּמּוּ חַטָּאִים ׀ מִן־הָאָרֶץ וּרְשָׁעִים ׀ עוֹד אֵינָם בָּרְכִי נַפְשִׁי אֶת־יְהֹוָה הַֽלְלוּ־יָֽהּ׃

< ಕೀರ್ತನೆಗಳು 104 >