< ಕೀರ್ತನೆಗಳು 105 >

1 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ; ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
הוֹדוּ לַיהֹוָה קִרְאוּ בִשְׁמוֹ הוֹדִיעוּ בָעַמִּים עֲלִילוֹתָֽיו׃
2 ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ; ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
שִֽׁירוּ־לוֹ זַמְּרוּ־לוֹ שִׂיחוּ בְּכׇל־נִפְלְאוֹתָֽיו׃
3 ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.
הִֽתְהַלְלוּ בְּשֵׁם קׇדְשׁוֹ יִשְׂמַח לֵב ׀ מְבַקְשֵׁי יְהֹוָֽה׃
4 ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.
דִּרְשׁוּ יְהֹוָה וְעֻזּוֹ בַּקְּשׁוּ פָנָיו תָּמִֽיד׃
5 ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
זִכְרוּ נִפְלְאוֹתָיו אֲשֶׁר־עָשָׂה מֹפְתָיו וּמִשְׁפְּטֵי־פִֽיו׃
6 ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,
זֶרַע אַבְרָהָם עַבְדּוֹ בְּנֵי יַעֲקֹב בְּחִירָֽיו׃
7 ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.
הוּא יְהֹוָה אֱלֹהֵינוּ בְּכׇל־הָאָרֶץ מִשְׁפָּטָֽיו׃
8 ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,
זָכַר לְעוֹלָם בְּרִיתוֹ דָּבָר צִוָּה לְאֶלֶף דּֽוֹר׃
9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.
אֲשֶׁר כָּרַת אֶת־אַבְרָהָם וּשְׁבוּעָתוֹ לְיִשְׂחָֽק׃
10 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:
וַיַּעֲמִידֶהָ לְיַעֲקֹב לְחֹק לְיִשְׂרָאֵל בְּרִית עוֹלָֽם׃
11 “ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”
לֵאמֹר לְךָ אֶתֵּן אֶת־אֶֽרֶץ־כְּנָעַן חֶבֶל נַחֲלַתְכֶֽם׃
12 ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.
בִּֽהְיוֹתָם מְתֵי מִסְפָּר כִּמְעַט וְגָרִים בָּֽהּ׃
13 ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.
וַיִּֽתְהַלְּכוּ מִגּוֹי אֶל־גּוֹי מִמַּמְלָכָה אֶל־עַם אַחֵֽר׃
14 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:
לֹא־הִנִּיחַ אָדָם לְעׇשְׁקָם וַיּוֹכַח עֲלֵיהֶם מְלָכִֽים׃
15 “ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”
אַֽל־תִּגְּעוּ בִמְשִׁיחָי וְלִנְבִיאַי אַל־תָּרֵֽעוּ׃
16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.
וַיִּקְרָא רָעָב עַל־הָאָרֶץ כׇּֽל־מַטֵּה־לֶחֶם שָׁבָֽר׃
17 ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು.
שָׁלַח לִפְנֵיהֶם אִישׁ לְעֶבֶד נִמְכַּר יוֹסֵֽף׃
18 ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.
עִנּוּ בַכֶּבֶל (רגליו) [רַגְלוֹ] בַּרְזֶל בָּאָה נַפְשֽׁוֹ׃
19 ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ ಅವನು ದೇವರ ಮಾತಿನಿಂದ ಪರಿಶೋಧಿತನಾದನು.
עַד־עֵת בֹּא־דְבָרוֹ אִמְרַת יְהֹוָה צְרָפָֽתְהוּ׃
20 ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು. ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು.
שָׁלַח מֶלֶךְ וַיַּתִּירֵהוּ מֹשֵׁל עַמִּים וַֽיְפַתְּחֵֽהוּ׃
21 ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,
שָׂמוֹ אָדוֹן לְבֵיתוֹ וּמֹשֵׁל בְּכׇל־קִנְיָנֽוֹ׃
22 ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.
לֶאְסֹר שָׂרָיו בְּנַפְשׁוֹ וּזְקֵנָיו יְחַכֵּֽם׃
23 ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
וַיָּבֹא יִשְׂרָאֵל מִצְרָיִם וְיַעֲקֹב גָּר בְּאֶֽרֶץ־חָֽם׃
24 ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು.
וַיֶּפֶר אֶת־עַמּוֹ מְאֹד וַיַּעֲצִמֵהוּ מִצָּרָֽיו׃
25 ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.
הָפַךְ לִבָּם לִשְׂנֹא עַמּוֹ לְהִתְנַכֵּל בַּעֲבָדָֽיו׃
26 ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.
שָׁלַח מֹשֶׁה עַבְדּוֹ אַהֲרֹן אֲשֶׁר בָּחַר־בּֽוֹ׃
27 ಇವರು ದೇವರ ಸೂಚಕಕಾರ್ಯಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
שָֽׂמוּ־בָם דִּבְרֵי אֹתוֹתָיו וּמֹפְתִים בְּאֶרֶץ חָֽם׃
28 ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?
שָׁלַֽח חֹשֶׁךְ וַיַּחְשִׁךְ וְלֹֽא־מָרוּ אֶת־[דְּבָרֽוֹ] (דבריו)׃
29 ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. ಅವರ ಮೀನುಗಳನ್ನು ನಾಶಮಾಡಿದರು.
הָפַךְ אֶת־מֵימֵיהֶם לְדָם וַיָּמֶת אֶת־דְּגָתָֽם׃
30 ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.
שָׁרַץ אַרְצָם צְפַרְדְּעִים בְּחַדְרֵי מַלְכֵיהֶֽם׃
31 ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
אָמַר וַיָּבֹא עָרֹב כִּנִּים בְּכׇל־גְּבוּלָֽם׃
32 ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ ಅವರ ದೇಶದಲ್ಲಿ ಬರಮಾಡಿದರು.
נָתַן גִּשְׁמֵיהֶם בָּרָד אֵשׁ לֶהָבוֹת בְּאַרְצָֽם׃
33 ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ ಅವರ ಮೇರೆಗಳ ಮರಗಳು ಮುರಿದು ಬಿದ್ದವು.
וַיַּךְ גַּפְנָם וּתְאֵנָתָם וַיְשַׁבֵּר עֵץ גְּבוּלָֽם׃
34 ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.
אָמַר וַיָּבֹא אַרְבֶּה וְיֶלֶק וְאֵין מִסְפָּֽר׃
35 ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು.
וַיֹּאכַל כׇּל־עֵשֶׂב בְּאַרְצָם וַיֹּאכַל פְּרִי אַדְמָתָֽם׃
36 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.
וַיַּךְ כׇּל־בְּכוֹר בְּאַרְצָם רֵאשִׁית לְכׇל־אוֹנָֽם׃
37 ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ.
וַֽיּוֹצִיאֵם בְּכֶסֶף וְזָהָב וְאֵין בִּשְׁבָטָיו כּוֹשֵֽׁל׃
38 ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.
שָׂמַח מִצְרַיִם בְּצֵאתָם כִּֽי־נָפַל פַּחְדָּם עֲלֵיהֶֽם׃
39 ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.
פָּרַשׂ עָנָן לְמָסָךְ וְאֵשׁ לְהָאִיר לָֽיְלָה׃
40 ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.
שָׁאַל וַיָּבֵא שְׂלָו וְלֶחֶם שָׁמַיִם יַשְׂבִּיעֵֽם׃
41 ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.
פָּתַח צוּר וַיָּזוּבוּ מָיִם הָלְכוּ בַּצִּיּוֹת נָהָֽר׃
42 ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.
כִּֽי־זָכַר אֶת־דְּבַר קׇדְשׁוֹ אֶֽת־אַבְרָהָם עַבְדּֽוֹ׃
43 ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.
וַיּוֹצִא עַמּוֹ בְשָׂשׂוֹן בְּרִנָּה אֶת־בְּחִירָֽיו׃
44 ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.
וַיִּתֵּן לָהֶם אַרְצוֹת גּוֹיִם וַעֲמַל לְאֻמִּים יִירָֽשׁוּ׃
45 ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ.
בַּעֲבוּר ׀ יִשְׁמְרוּ חֻקָּיו וְתוֹרֹתָיו יִנְצֹרוּ הַֽלְלוּ־יָֽהּ׃

< ಕೀರ್ತನೆಗಳು 105 >