< ಕೀರ್ತನೆಗಳು 106 >
1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.
Msifuni Bwana. Mshukuruni Bwana, kwa kuwa ni mwema; upendo wake wadumu milele.
2 ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?
Ni nani awezaye kusimulia matendo makuu ya Bwana au kutangaza kikamilifu sifa zake?
3 ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.
Heri wale wanaodumisha haki, ambao daima wanafanya yaliyo mema.
4 ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.
Ee Bwana, unikumbuke unapowatendea mema watu wako, uwe msaada wangu unapowaokoa,
5 ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.
ili niweze kufurahia mafanikio ya wateule wako, niweze kushiriki katika furaha ya taifa lako, na kuungana na urithi wako katika kukusifu.
6 ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.
Tumetenda dhambi, kama vile baba zetu walivyotenda, tumekosa na tumetenda uovu.
7 ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.
Wakati baba zetu walipokuwa Misri, hawakuzingatia maajabu yako, wala hawakukumbuka wingi wa fadhili zako, bali waliasi kando ya bahari, Bahari ya Shamu.
8 ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.
Hata hivyo aliwaokoa kwa ajili ya jina lake, ili apate kudhihirisha uweza wake mkuu.
9 ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.
Alikemea Bahari ya Shamu, nayo ikakauka, akawaongoza katika vilindi vyake kama vile jangwani.
10 ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.
Aliwaokoa mikononi mwa adui; kutoka mikononi mwa adui aliwakomboa.
11 ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ.
Maji yaliwafunika adui zao, hakunusurika hata mmoja.
12 ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು.
Ndipo walipoamini ahadi zake, nao wakaimba sifa zake.
13 ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.
Lakini mara walisahau aliyowatendea, wala hawakungojea shauri lake.
14 ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು.
Jangwani walitawaliwa na tamaa zao, walimjaribu Mungu nyikani.
15 ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು.
Kwa hiyo aliwapa kile walichoomba, lakini akatuma juu yao ugonjwa wa kudhoofisha.
16 ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.
Kambini walimwonea wivu Mose, na pia Aroni aliyekuwa amewekwa wakfu kwa Bwana.
17 ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು.
Ardhi ilifunguka ikawameza Dathani, ikawazika Abiramu na kundi lake.
18 ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
Moto uliwaka katikati ya wafuasi wao, mwali wa moto uliwateketeza waovu.
19 ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು.
Huko Horebu walitengeneza ndama, na kuabudu sanamu ya kusubu kwa chuma.
20 ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
Waliubadilisha Utukufu wao kwa sanamu ya fahali, ambaye hula majani.
21 ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,
Walimsahau Mungu aliyewaokoa, aliyekuwa ametenda mambo makuu huko Misri,
22 ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು.
miujiza katika nchi ya Hamu na mambo ya kutisha huko Bahari ya Shamu.
23 ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.
Kwa hiyo alisema kwamba angewaangamiza: kama Mose mteule wake, asingesimama kati yao na Mungu kuizuia ghadhabu yake kuwaangamiza.
24 ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.
Kisha waliidharau ile nchi nzuri, hawakuiamini ahadi yake.
25 ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು.
Walinungʼunika ndani ya mahema yao, wala hawakumtii Bwana.
26 ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ
Kwa hiyo akaapa kwa mkono ulioinuliwa kwamba atawafanya waanguke jangwani,
27 ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.
kuwatawanya wazao wao waanguke miongoni mwa mataifa, na kuwatawanya katika nchi zote.
28 ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.
Walijifunga nira na Baali wa Peori, wakala dhabihu zilizotolewa kwa miungu isiyo na uhai.
29 ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.
Waliichochea hasira ya Bwana, wakamkasirisha kwa matendo yao maovu, nayo tauni ikazuka katikati yao.
30 ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.
Lakini Finehasi alisimama na kuingilia kati, nayo tauni ikazuiliwa.
31 ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.
Hili likahesabiwa kwake haki, kwa vizazi visivyo na mwisho vijavyo.
32 ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.
Kwenye maji ya Meriba, walimkasirisha Bwana, janga likampata Mose kwa sababu yao;
33 ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
kwa maana walimwasi Roho wa Mungu, na maneno yasiyofaa yakatoka midomoni kwa Mose.
34 ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.
Hawakuyaangamiza yale mataifa kama Bwana alivyowaagiza,
35 ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.
bali walijichanganya na mataifa na wakazikubali desturi zao.
36 ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.
Waliabudu sanamu zao, zikawa mtego kwao.
37 ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು.
Wakawatoa wana wao na binti zao dhabihu kwa mashetani.
38 ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.
Walimwaga damu isiyo na hatia, damu za wana wao na binti zao, ambao waliwatoa dhabihu kwa sanamu za Kanaani, nayo nchi ikanajisika kwa damu zao.
39 ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.
Wakajinajisi wenyewe kwa yale waliyotenda; kwa matendo yao wenyewe wakajifanyia ukahaba.
40 ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,
Kwa hiyo Bwana akawakasirikia watu wake na akauchukia sana urithi wake.
41 ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.
Akawakabidhi kwa mataifa na adui zao wakawatawala.
42 ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.
Adui zao wakawaonea na kuwatia chini ya mamlaka yao.
43 ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;
Mara nyingi aliwaokoa lakini walikuwa wamezama kwenye uasi, nao wakajiharibu katika dhambi zao.
44 ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,
Lakini akaangalia mateso yao wakati aliposikia kilio chao;
45 ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,
kwa ajili yao akakumbuka agano lake, na kutokana na upendo wake mkuu akapooza hasira yake.
46 ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.
Akawafanya wahurumiwe na wote waliowashikilia mateka.
47 ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.
Ee Bwana Mungu wetu, tuokoe. Tukusanye tena kutoka kwa mataifa, ili tuweze kulishukuru jina lako takatifu, na kushangilia katika sifa zako.
48 ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.
Atukuzwe Bwana, Mungu wa Israeli, tangu milele na hata milele. Watu wote na waseme, “Amen!” Msifuni Bwana.