< ಕೀರ್ತನೆಗಳು 109 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ನಾನು ಸ್ತುತಿಸುವ ದೇವರೇ, ನೀವು ಮೌನವಾಗಿರಬೇಡಿರಿ.
למנצח לדוד מזמור אלהי תהלתי אל-תחרש
2 ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು ನನಗೆ ವಿರೋಧವಾಗಿ ತೆರೆದಿದ್ದಾರೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
כי פי רשע ופי-מרמה--עלי פתחו דברו אתי לשון שקר
3 ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.
ודברי שנאה סבבוני וילחמוני חנם
4 ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ; ಆದರೆ ನಾನು ಪ್ರಾರ್ಥನೆಯ ಮನುಷ್ಯನು.
תחת-אהבתי ישטנוני ואני תפלה
5 ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ.
וישימו עלי רעה תחת טובה ושנאה תחת אהבתי
6 ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
הפקד עליו רשע ושטן יעמד על-ימינו
7 ಅವನಿಗೆ ನ್ಯಾಯತೀರಿಸುವಾಗ ಅಪರಾಧಿಯೆಂದು ತೀರ್ಪು ಹೊಂದಲಿ; ಅವನ ಪ್ರಾರ್ಥನೆಯೇ ಅವನನ್ನು ಖಂಡಿಸಲಿ.
בהשפטו יצא רשע ותפלתו תהיה לחטאה
8 ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ.
יהיו-ימיו מעטים פקדתו יקח אחר
9 ಅವನ ಮಕ್ಕಳು ದಿಕ್ಕಿಲ್ಲದವರಾಗಲಿ, ಅವನ ಹೆಂಡತಿ ವಿಧವೆಯೂ ಆಗಲಿ.
יהיו-בניו יתומים ואשתו אלמנה
10 ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.
ונוע ינועו בניו ושאלו ודרשו מחרבותיהם
11 ಸಾಲಗಾರರು ಅವನಿಗೆ ಇರುವುದನ್ನೆಲ್ಲಾ ದೋಚಿಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.
ינקש נושה לכל-אשר-לו ויבזו זרים יגיעו
12 ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ.
אל-יהי-לו משך חסד ואל-יהי חונן ליתומיו
13 ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
יהי-אחריתו להכרית בדור אחר ימח שמם
14 ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
יזכר עון אבתיו--אל-יהוה וחטאת אמו אל-תמח
15 ಅವು ಯಾವಾಗಲೂ ಯೆಹೋವ ದೇವರ ಮುಂದೆ ಇರಲಿ; ದೇವರು ಅವರ ನೆನಪನ್ನು ಭೂಮಿಯೊಳಗಿಂದ ತೆಗೆದುಬಿಡಲಿ.
יהיו נגד-יהוה תמיד ויכרת מארץ זכרם
16 ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ. ಬಡವನನ್ನೂ, ದೀನನನ್ನೂ, ಮನಗುಂದಿದವನನ್ನೂ ಹಿಂಸಿಸಿ ಸಾಯಿಸಬೇಕೆಂದು ಯತ್ನಿಸಿದನು.
יען-- אשר לא זכר עשות חסד וירדף איש-עני ואביון--ונכאה לבב למותת
17 ಅವನು ಶಾಪಕೊಡಲು ಇಷ್ಟಪಟ್ಟನು; ಅದೇ ಅವನಿಗೆ ಬರಲಿ; ಅವನು ಆಶೀರ್ವಾದವನ್ನು ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
ויאהב קללה ותבואהו ולא-חפץ בברכה ותרחק ממנו
18 ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಿತು.
וילבש קללה כמדו ותבא כמים בקרבו וכשמן בעצמותיו
19 ಶಾಪವು ಅವನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ, ಯಾವಾಗಲೂ ಸೊಂಟಕ್ಕೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
תהי-לו כבגד יעטה ולמזח תמיד יחגרה
20 ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.
זאת פעלת שטני מאת יהוה והדברים רע על-נפשי
21 ಆದರೆ ಸಾರ್ವಭೌಮ ಯೆಹೋವ ದೇವರೇ, ನಿಮ್ಮ ಹೆಸರಿಗೋಸ್ಕರ ನನಗೆ ಸಹಾಯಮಾಡಿರಿ. ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನ್ನನ್ನು ಬಿಡಿಸಿರಿ.
ואתה יהוה אדני-- עשה-אתי למען שמך כי-טוב חסדך הצילני
22 ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ.
כי-עני ואביון אנכי ולבי חלל בקרבי
23 ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ; ಮಿಡತೆಯ ಹಾಗೆ ಹಾರಾಡುತ್ತಿದ್ದೇನೆ.
כצל-כנטותו נהלכתי ננערתי כארבה
24 ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ದೇಹಕ್ಕೆ ಸಾರವಿಲ್ಲದೆ ಹೋಯಿತು.
ברכי כשלו מצום ובשרי כחש משמן
25 ನಾನು ನನ್ನ ದೂರುಗಾರರಿಗೆ ನಿಂದೆಯಾಗಿದ್ದೇನೆ; ಅವರು ನನ್ನನ್ನು ಕಂಡು ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
ואני הייתי חרפה להם יראוני יניעון ראשם
26 ನನ್ನ ದೇವರಾದ ಯೆಹೋವ ದೇವರೇ, ನನಗೆ ಸಹಾಯಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ಪ್ರಕಾರ ನನ್ನನ್ನು ರಕ್ಷಿಸಿರಿ.
עזרני יהוה אלהי הושיעני כחסדך
27 ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ.
וידעו כי-ידך זאת אתה יהוה עשיתה
28 ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. ನನಗೆ ಹಾನಿಮಾಡುವವರು ನಾಚಿಕೆಪಡಲಿ; ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ.
יקללו-המה ואתה תברך קמו ויבשו--ועבדך ישמח
29 ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
ילבשו שוטני כלמה ויעטו כמעיל בשתם
30 ನಾನು ಯೆಹೋವ ದೇವರನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಅನೇಕರ ಮಧ್ಯದಲ್ಲಿ ದೇವರನ್ನು ಸ್ತುತಿಸುವೆನು.
אודה יהוה מאד בפי ובתוך רבים אהללנו
31 ದೇವರು ಬಡವನ ಬಲಗಡೆಯಲ್ಲಿ ನಿಂತು, ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು.
כי-יעמד לימין אביון-- להושיע משפטי נפשו

< ಕೀರ್ತನೆಗಳು 109 >