< ಕೀರ್ತನೆಗಳು 11 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?
मेरा भरोसा ख़ुदावन्द पर है तुम क्यूँकर मेरी जान से कहते हो कि चिड़िया की तरह अपने पहाड़ पर उड़ जा?
2 “ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.
क्यूँकि देखो! शरीर कमान खींचते हैं वह तीर को चिल्ले पर रखते हैं ताकि अँधेरे में रास्त दिलों पर चलायें।
3 ಅಸ್ತಿವಾರಗಳೇ ಕೆಡವುತ್ತಿರಲು, ನೀತಿವಂತನು ಏನು ಮಾಡಲು ಸಾಧ್ಯ?”
अगर बुनयाद ही उखाड़ दी जाये तो सादिक़ क्या कर सकता है।
4 ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.
ख़ुदावन्द अपनी पाक हैकल में है ख़ुदावन्द का तख़्त आसमान पर है। उसकी आँखें बनी आदम को देखती और उसकी पलकें उनको जाँचती हैं।
5 ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.
ख़ुदावन्द सादिक़ को परखता है लेकिन शरीर और ज़ुल्म को पसन्द करने वाले से उसकी रूह को नफ़रत है
6 ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.
वह शरीरों पर फंदे बरसायेगा आग और गंधक और लू उनके प्याले का हिस्सा होगा।
7 ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.
क्यूँकि ख़ुदावन्द सादिक़ है वह सच्चाई को पसंद करता है रास्त बाज़ उसका दीदार हासिल करेंगे।