< ಕೀರ್ತನೆಗಳು 112 >
1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.
亞肋路亞!凡敬畏上主的人,真是有福,喜歡他誡命的人,真是有福!
2 ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು.
他的子孫在世上必要強盛,義人的後代必要受到讚頌。
3 ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.
他家中必有權勢財產,他的仁義必存留永遠。
4 ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.
上主富有仁愛慈悲公道,像光明在暗處向義人照耀。
5 ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.
樂善好施的人必蒙受祝福,祂以正義處理自己的事務。
6 ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.
因為他永遠不會失足抖顫,義人必要受人永遠的記念。
7 ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.
噩耗的凶信,不會使他驚慌,因為仰賴上主心志堅強。
8 ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು.
直到看見他的仇敵蒙羞,他的心志堅強無懼無憂。
9 ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.
他散財周濟貧苦的人。他的仁義必萬世留存,他的頭角必受光榮。
10 ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.
罪人見到必要憤恨滿腔,咬自己的牙齒,焦灼難當,惡人的希望終必喪亡。