< ಕೀರ್ತನೆಗಳು 115 >

1 ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.
לֹא לָנוּ יְהֹוָה לֹא־לָנוּ כִּֽי־לְשִׁמְךָ תֵּן כָּבוֹד עַל־חַסְדְּךָ עַל־אֲמִתֶּֽךָ׃
2 “ಅವರ ದೇವರು ಎಲ್ಲಿ?” ಎಂದು ಜನಾಂಗಗಳು ಏಕೆ ಹೇಳಬೇಕು?
לָמָּה יֹאמְרוּ הַגּוֹיִם אַיֵּה־נָא אֱלֹהֵיהֶֽם׃
3 ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.
וֵאלֹהֵינוּ בַשָּׁמָיִם כֹּל אֲשֶׁר־חָפֵץ עָשָֽׂה׃
4 ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.
עֲֽצַבֵּיהֶם כֶּסֶף וְזָהָב מַעֲשֵׂה יְדֵי אָדָֽם׃
5 ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.
פֶּֽה־לָהֶם וְלֹא יְדַבֵּרוּ עֵינַיִם לָהֶם וְלֹא יִרְאֽוּ׃
6 ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಮೂಗು ಉಂಟು, ಮೂಸುವದಿಲ್ಲ.
אׇזְנַיִם לָהֶם וְלֹא יִשְׁמָעוּ אַף לָהֶם וְלֹא יְרִיחֽוּן׃
7 ಕೈಗಳುಂಟು, ಮುಟ್ಟುವುದಿಲ್ಲ; ಕಾಲುಗಳುಂಟು, ನಡೆಯುವುದಿಲ್ಲ; ಅವರ ಗಂಟಲಿನಿಂದ ಧ್ವನಿ ಉಚ್ಚರಿಸಲು ಸಾಧ್ಯವಿಲ್ಲ.
יְדֵיהֶם ׀ וְלֹא יְמִישׁוּן רַגְלֵיהֶם וְלֹא יְהַלֵּכוּ לֹא־יֶהְגּוּ בִּגְרוֹנָֽם׃
8 ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.
כְּמוֹהֶם יִהְיוּ עֹשֵׂיהֶם כֹּל אֲשֶׁר־בֹּטֵחַ בָּהֶֽם׃
9 ಇಸ್ರಾಯೇಲರ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.
יִשְׂרָאֵל בְּטַח בַּיהֹוָה עֶזְרָם וּמָגִנָּם הֽוּא׃
10 ಆರೋನನ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.
בֵּית אַהֲרֹן בִּטְחוּ בַיהֹוָה עֶזְרָם וּמָגִנָּם הֽוּא׃
11 ಯೆಹೋವ ದೇವರಿಗೆ ಭಯಪಡುವವರೇ, ನೀವು ಯೆಹೋವ ದೇವರಲ್ಲಿಯೇ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ ಗುರಾಣಿಯೂ ಆಗಿದ್ದಾರೆ.
יִרְאֵי יְהֹוָה בִּטְחוּ בַיהֹוָה עֶזְרָם וּמָגִנָּם הֽוּא׃
12 ಯೆಹೋವ ದೇವರು ನಮ್ಮನ್ನು ಜ್ಞಾಪಕ ಮಾಡಿಕೊಂಡಿದ್ದಾರೆ, ಅವರು ನಮ್ಮನ್ನು ಆಶೀರ್ವದಿಸುವರು; ಇಸ್ರಾಯೇಲರ ಮನೆಯನ್ನು ಆಶೀರ್ವದಿಸುವರು; ಆರೋನನ ಮನೆಯನ್ನು ಆಶೀರ್ವದಿಸುವರು.
יְהֹוָה זְכָרָנוּ יְבָרֵךְ יְבָרֵךְ אֶת־בֵּית יִשְׂרָאֵל יְבָרֵךְ אֶת־בֵּית אַהֲרֹֽן׃
13 ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು.
יְבָרֵךְ יִרְאֵי יְהֹוָה הַקְּטַנִּים עִם־הַגְּדֹלִֽים׃
14 ಯೆಹೋವ ದೇವರು ನಿಮ್ಮನ್ನು ಅಭಿವೃದ್ಧಿಪಡಿಸುವರು ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವರು.
יֹסֵף יְהֹוָה עֲלֵיכֶם עֲלֵיכֶם וְעַל־בְּנֵיכֶֽם׃
15 ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದ ನೀವು ಆಶೀರ್ವಾದ ಹೊಂದಿದವರು.
בְּרוּכִים אַתֶּם לַיהֹוָה עֹשֵׂה שָׁמַיִם וָאָֽרֶץ׃
16 ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.
הַשָּׁמַיִם שָׁמַיִם לַיהֹוָה וְהָאָרֶץ נָתַן לִבְנֵי־אָדָֽם׃
17 ಸತ್ತವರೂ ಮೌನಲೋಕವನ್ನು ಇಳಿದವರೆಲ್ಲರೂ ಯೆಹೋವ ದೇವರನ್ನು ಸ್ತುತಿಸುವುದಿಲ್ಲ.
לֹא הַמֵּתִים יְהַֽלְלוּ־יָהּ וְלֹא כׇּל־יֹרְדֵי דוּמָֽה׃
18 ಆದರೆ ನಾವು ಈಗಲೂ ಯುಗಯುಗಕ್ಕೂ ಯೆಹೋವ ದೇವರನ್ನು ಸ್ತುತಿಸುವೆವು. ಯೆಹೋವ ದೇವರನ್ನು ಸ್ತುತಿಸಿರಿ.
וַאֲנַחְנוּ ׀ נְבָרֵךְ יָהּ מֵעַתָּה וְעַד־עוֹלָם הַֽלְלוּ־יָֽהּ׃

< ಕೀರ್ತನೆಗಳು 115 >