< ಕೀರ್ತನೆಗಳು 116 >

1 ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ; ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ.
אָ֭הַבְתִּי כִּֽי־יִשְׁמַ֥ע ׀ יְהוָ֑ה אֶת־קֹ֝ולִ֗י תַּחֲנוּנָֽי׃
2 ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.
כִּֽי־הִטָּ֣ה אָזְנֹ֣ו לִ֑י וּבְיָמַ֥י אֶקְרָֽא׃
3 ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. (Sheol h7585)
אֲפָפ֤וּנִי ׀ חֶבְלֵי־מָ֗וֶת וּמְצָרֵ֣י שְׁאֹ֣ול מְצָא֑וּנִי צָרָ֖ה וְיָגֹ֣ון אֶמְצָֽא׃ (Sheol h7585)
4 ಆಗ ನಾನು, “ಓ ಯೆಹೋವ ದೇವರೇ, ನನ್ನನ್ನು ರಕ್ಷಿಸಿರಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಬೇಡಿದೆನು.
וּבְשֵֽׁם־יְהוָ֥ה אֶקְרָ֑א אָנָּ֥ה יְ֝הוָ֗ה מַלְּטָ֥ה נַפְשִֽׁי׃
5 ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು ನಮ್ಮ ದೇವರು ಅನುಕಂಪ ಭರಿತರು.
חַנּ֣וּן יְהֹוָ֣ה וְצַדִּ֑יק וֵ֖אלֹהֵ֣ינוּ מְרַחֵֽם׃
6 ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ; ನಾನು ಕೊರತೆಯಲ್ಲಿದ್ದಾಗ, ಅವರು ನನ್ನನ್ನು ರಕ್ಷಿಸಿದರು.
שֹׁמֵ֣ר פְּתָאיִ֣ם יְהֹוָ֑ה דַּ֝לֹּותִ֗י וְלִ֣י יְהֹושִֽׁיעַ׃
7 ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.
שׁוּבִ֣י נַ֭פְשִׁי לִמְנוּחָ֑יְכִי כִּֽי־יְ֝הוָ֗ה גָּמַ֥ל עָלָֽיְכִי׃
8 ಏಕೆಂದರೆ ಯೆಹೋವ ದೇವರೇ, ನೀವು ನನ್ನನ್ನು ಮರಣಕ್ಕೂ, ನನ್ನ ಕಣ್ಣುಗಳನ್ನು ಕಣ್ಣೀರಿಗೂ, ನನ್ನ ಪಾದಗಳನ್ನು ಬೀಳದಂತೆಯೂ ತಪ್ಪಿಸಿದ್ದೀರಿ.
כִּ֤י חִלַּ֥צְתָּ נַפְשִׁ֗י מִ֫מָּ֥וֶת אֶת־עֵינִ֥י מִן־דִּמְעָ֑ה אֶת־רַגְלִ֥י מִדֶּֽחִי׃
9 ಆದ್ದರಿಂದ ಜೀವಿತರ ಲೋಕದಲ್ಲಿ ಯೆಹೋವ ದೇವರ ಮುಂದೆ ನಡೆದುಕೊಳ್ಳುವೆನು.
אֶ֭תְהַלֵּךְ לִפְנֵ֣י יְהוָ֑ה בְּ֝אַרְצֹ֗ות הַֽחַיִּֽים׃
10 “ನಾನು ಬಹಳ ಕುಗ್ಗಿ ಹೋಗಿದ್ದೇನೆ,” ಎಂದು ನಾನು ದೇವರಲ್ಲಿ ಭರವಸೆ ಇಟ್ಟಾಗ ಹೇಳಿದೆ.
הֶ֭אֱמַנְתִּי כִּ֣י אֲדַבֵּ֑ר אֲ֝נִ֗י עָנִ֥יתִי מְאֹֽד׃
11 “ಮನುಷ್ಯರೆಲ್ಲರು ಸುಳ್ಳುಗಾರರು,” ಎಂದು ನಾನು ನಿರಾಶೆಯಿಂದ ಹೇಳಿದ್ದೆನು.
אֲ֭נִי אָמַ֣רְתִּי בְחָפְזִ֑י כָּֽל־הָאָדָ֥ם כֹּזֵֽב׃
12 ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?
מָֽה־אָשִׁ֥יב לַיהוָ֑ה כָּֽל־תַּגְמוּלֹ֥והִי עָלָֽי׃
13 ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು, ಯೆಹೋವ ದೇವರ ಹೆಸರನ್ನು ಕರೆಯುವೆನು.
כֹּוס־יְשׁוּעֹ֥ות אֶשָּׂ֑א וּבְשֵׁ֖ם יְהוָ֣ה אֶקְרָֽא׃
14 ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು.
נְ֭דָרַי לַיהוָ֣ה אֲשַׁלֵּ֑ם נֶגְדָה־נָּ֝֗א לְכָל־עַמֹּֽו׃
15 ದೇವರ ಭಕ್ತರ ಮರಣವು ಯೆಹೋವ ದೇವರ ದೃಷ್ಟಿಯಲ್ಲಿ ಅಮೂಲ್ಯವಾಗಿದೆ.
יָ֭קָר בְּעֵינֵ֣י יְהוָ֑ה הַ֝מָּ֗וְתָה לַחֲסִידָֽיו׃
16 ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.
אֽ͏ָנָּ֣ה יְהוָה֮ כִּֽי־אֲנִ֪י עַ֫בְדֶּ֥ךָ אֲ‍ֽנִי־עַ֭בְדְּךָ בֶּן־אֲמָתֶ֑ךָ פִּ֝תַּ֗חְתָּ לְמֹוסֵרָֽי׃
17 ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.
לְֽךָ־אֶ֭זְבַּח זֶ֣בַח תֹּודָ֑ה וּבְשֵׁ֖ם יְהוָ֣ה אֶקְרָֽא׃
18 ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು,
נְ֭דָרַי לַיהוָ֣ה אֲשַׁלֵּ֑ם נֶגְדָה־נָּ֝֗א לְכָל־עַמֹּֽו׃
19 ಯೆಹೋವ ದೇವರ ಆಲಯದ ಅಂಗಳಗಳಲ್ಲಿ ಯೆರೂಸಲೇಮ ಮಧ್ಯದಲ್ಲಿಯೇ ಯೆಹೋವ ದೇವರಿಗೆ ಸಲ್ಲಿಸುವೆನು. ಯೆಹೋವ ದೇವರನ್ನು ಸ್ತುತಿಸಿರಿ.
בְּחַצְרֹ֤ות ׀ בֵּ֤ית יְהוָ֗ה בְּֽתֹ֘וכֵ֤כִי יְֽרוּשָׁלָ֗͏ִם הַֽלְלוּ־יָֽהּ׃

< ಕೀರ್ತನೆಗಳು 116 >