< ಕೀರ್ತನೆಗಳು 118 >

1 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.
הֹוד֣וּ לַיהוָ֣ה כִּי־טֹ֑וב כִּ֖י לְעֹולָ֣ם חַסְדֹּֽו׃
2 “ದೇವರ ಪ್ರೀತಿಯು ಯುಗಯುಗಕ್ಕೂ ಇದೆ,” ಎಂದು ಇಸ್ರಾಯೇಲ್ ಹೇಳಲಿ.
יֹֽאמַר־נָ֥א יִשְׂרָאֵ֑ל כִּ֖י לְעֹולָ֣ם חַסְדֹּֽו׃
3 “ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಆರೋನನ ಮನೆಯವರು ಹೇಳಲಿ.
יֹֽאמְרוּ־נָ֥א בֵֽית־אַהֲרֹ֑ן כִּ֖י לְעֹולָ֣ם חַסְדֹּֽו׃
4 “ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಯೆಹೋವ ದೇವರಿಗೆ ಭಯಪಡುವವರು ಹೇಳಲಿ.
יֹֽאמְרוּ־נָ֭א יִרְאֵ֣י יְהוָ֑ה כִּ֖י לְעֹולָ֣ם חַסְדֹּֽו׃
5 ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು; ಯೆಹೋವ ದೇವರು ಉತ್ತರಕೊಟ್ಟು, ನನ್ನನ್ನು ವಿಶಾಲವಾದ ಸ್ಥಳಕ್ಕೆ ತಂದರು.
מִֽן־הַ֭מֵּצַ֥ר קָרָ֣אתִי יָּ֑הּ עָנָ֖נִי בַמֶּרְחָ֣ב יָֽהּ׃
6 ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?
יְהוָ֣ה לִ֭י לֹ֣א אִירָ֑א מַה־יַּעֲשֶׂ֖ה לִ֣י אָדָֽם׃
7 ಯೆಹೋವ ದೇವರು ನನ್ನೊಂದಿಗಿದ್ದಾರೆ, ಅವರು ನನಗೆ ಸಹಾಯಕರು; ನಾನು ವೈರಿಗಳ ಮೇಲೆ ಜಯ ಸಾಧಿಸುವೆನು.
יְהוָ֣ה לִ֭י בְּעֹזְרָ֑י וַ֝אֲנִ֗י אֶרְאֶ֥ה בְשֹׂנְאָֽי׃
8 ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.
טֹ֗וב לַחֲסֹ֥ות בַּיהוָ֑ה מִ֝בְּטֹ֗חַ בָּאָדָֽם׃
9 ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು.
טֹ֗וב לַחֲסֹ֥ות בַּיהוָ֑ה מִ֝בְּטֹ֗חַ בִּנְדִיבִֽים׃
10 ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು.
כָּל־גֹּויִ֥ם סְבָב֑וּנִי בְּשֵׁ֥ם יְ֝הוָ֗ה כִּ֣י אֲמִילַֽם׃
11 ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು.
סַבּ֥וּנִי גַם־סְבָב֑וּנִי בְּשֵׁ֥ם יְ֝הוָ֗ה כִּ֣י אֲמִילַֽם׃
12 ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು.
סַבּ֤וּנִי כִדְבֹורִ֗ים דֹּ֭עֲכוּ כְּאֵ֣שׁ קֹוצִ֑ים בְּשֵׁ֥ם יְ֝הוָ֗ה כִּ֣י אֲמִילַֽם׃
13 ನಾನು ಬೀಳುವ ಹಾಗೆ ವೈರಿಯು ನನ್ನನ್ನು ನೂಕಿದನು; ಆದರೆ ಯೆಹೋವ ದೇವರು ನನಗೆ ಸಹಾಯ ಮಾಡಿದರು.
דַּחֹ֣ה דְחִיתַ֣נִי לִנְפֹּ֑ל וַ֖יהוָ֣ה עֲזָרָֽנִי׃
14 ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ; ಅವರೇ ನನಗೆ ರಕ್ಷಣೆಯಾದರು.
עָזִּ֣י וְזִמְרָ֣ת יָ֑הּ וַֽיְהִי־לִ֝֗י לִֽישׁוּעָֽה׃
15 ಜಯಘೋಷವೂ ಹರ್ಷಧ್ವನಿಯೂ ನೀತಿವಂತರ ಗುಡಾರಗಳಲ್ಲಿ ಪ್ರತಿಧ್ವನಿಸುತ್ತಿರುವುದು; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.
קֹ֤ול ׀ רִנָּ֬ה וִֽישׁוּעָ֗ה בְּאָהֳלֵ֥י צַדִּיקִ֑ים יְמִ֥ין יְ֝הוָה עֹ֣שָׂה חָֽיִל׃
16 ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.
יְמִ֣ין יְ֭הוָה רֹומֵמָ֑ה יְמִ֥ין יְ֝הוָה עֹ֣שָׂה חָֽיִל׃
17 ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು.
לֹֽא אָמ֥וּת כִּי־אֶֽחְיֶ֑ה וַ֝אֲסַפֵּ֗ר מַֽעֲשֵׂ֥י יָֽהּ׃
18 ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
יַסֹּ֣ר יִסְּרַ֣נִּי יָּ֑הּ וְ֝לַמָּ֗וֶת לֹ֣א נְתָנָֽנִי׃
19 ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು.
פִּתְחוּ־לִ֥י שַׁעֲרֵי־צֶ֑דֶק אָֽבֹא־בָ֝ם אֹודֶ֥ה יָֽהּ׃
20 ಇದೇ ಯೆಹೋವ ದೇವರ ಬಾಗಿಲು; ನೀತಿವಂತರು ಇದರಲ್ಲಿ ಪ್ರವೇಶಿಸುವರು.
זֶֽה־הַשַּׁ֥עַר לַיהוָ֑ה צַ֝דִּיקִ֗ים יָבֹ֥אוּ בֹֽו׃
21 ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ.
אֹ֭ודְךָ כִּ֣י עֲנִיתָ֑נִי וַתְּהִי־לִ֝֗י לִֽישׁוּעָֽה׃
22 ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
אֶ֭בֶן מָאֲס֣וּ הַבֹּונִ֑ים הָ֝יְתָ֗ה לְרֹ֣אשׁ פִּנָּֽה׃
23 ಇದು ಯೆಹೋವ ದೇವರಿಂದಲೇ ಉಂಟಾಯಿತು; ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಯಿತು.
מֵאֵ֣ת יְ֭הוָה הָ֣יְתָה זֹּ֑את הִ֖יא נִפְלָ֣את בְּעֵינֵֽינוּ׃
24 ಯೆಹೋವ ದೇವರು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡೋಣ.
זֶה־הַ֭יֹּום עָשָׂ֣ה יְהוָ֑ה נָגִ֖ילָה וְנִשְׂמְחָ֣ה בֹֽו׃
25 ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ, ಯೆಹೋವ ದೇವರೇ ನಮಗೆ ಜಯಕೊಡಿರಿ.
אָנָּ֣א יְ֭הוָה הֹושִׁ֘יעָ֥ה נָּ֑א אָֽנָּ֥א יְ֝הוָ֗ה הַצְלִ֘יחָ֥ה נָּֽא׃
26 ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು; ಯೆಹೋವ ದೇವರ ಆಲಯದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸುವೆವು.
בָּר֣וּךְ הַ֭בָּא בְּשֵׁ֣ם יְהוָ֑ה בֵּ֝רַֽכְנוּכֶ֗ם מִבֵּ֥ית יְהוָֽה׃
27 ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.
אֵ֤ל ׀ יְהוָה֮ וַיָּ֪אֶר לָ֥נוּ אִסְרוּ־חַ֥ג בַּעֲבֹתִ֑ים עַד־קַ֝רְנֹ֗ות הַמִּזְבֵּֽחַ׃
28 ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು; ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು.
אֵלִ֣י אַתָּ֣ה וְאֹודֶ֑ךָּ אֱ֝לֹהַ֗י אֲרֹומְמֶֽךָּ׃
29 ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.
הֹוד֣וּ לַיהוָ֣ה כִּי־טֹ֑וב כִּ֖י לְעֹולָ֣ם חַסְדֹּֽו׃

< ಕೀರ್ತನೆಗಳು 118 >