< ಕೀರ್ತನೆಗಳು 120 >
1 ಯಾತ್ರಾ ಗೀತೆ. ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.
我受難時一呼求上主,祂就俯聽了我的呼求。
2 ಯೆಹೋವ ದೇವರೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ, ಮೋಸದ ನಾಲಿಗೆಯಿಂದಲೂ ಬಿಡಿಸಿರಿ.
上主,求您救我脫離說謊者的口脣,上主,求您救我擺脫詭詐的舌根。
3 ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
您這詭詐的口舌,究竟怎樣對待付您?究竟怎樣懲治您?
4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.
只有勇士的矢箭,還有杜松的火炭!
5 ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.
我真不幸! 因為要在默舍客居住,要在刻達爾的帳幕寄宿。
6 ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು.
因與憎惡和平的人相處,我的靈魂已經感到太久。
7 ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.
我言談無非和平,他們卻鼓勵戰爭。