< ಕೀರ್ತನೆಗಳು 121 >

1 ಯಾತ್ರಾ ಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?
Ziyarət nəğməsi. Gözlərimi dağlara dikirəm, Haradan mənə kömək gələcək?
2 ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ.
Göyləri və yeri yaradan Rəbdən Mənə kömək gələcək.
3 ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.
O, ayaqlarını büdrəməyə qoymaz, Səni qoruyan yatmaz.
4 ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ.
Bax İsraili qoruyan yuxulamaz, Yatıb qalmaz.
5 ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ.
Səni qoruyan Rəbdir, O, sağ tərəfindədir, sənə kölgədir.
6 ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ.
Gündüz günəşin ziyanı sənə dəyməz, Gecə ay da sənə zərər verməz.
7 ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, ನಿಮ್ಮ ಪ್ರಾಣವನ್ನೂ ಕಾಪಾಡುವರು.
Rəbb səni hər cür şərdən saxlayar, Canını qoruyar.
8 ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.
Rəbb gediş-gəlişini hifz edər İndidən sonsuza qədər.

< ಕೀರ್ತನೆಗಳು 121 >