< ಕೀರ್ತನೆಗಳು 122 >

1 ದಾವೀದನ ಯಾತ್ರಾ ಗೀತೆ. “ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.
שיר המעלות לדוד שמחתי באמרים לי-- בית יהוה נלך
2 ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.
עמדות היו רגלינו-- בשעריך ירושלם
3 ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.
ירושלם הבנויה-- כעיר שחברה-לה יחדו
4 ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.
ששם עלו שבטים שבטי-יה--עדות לישראל להדות לשם יהוה
5 ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
כי שמה ישבו כסאות למשפט כסאות לבית דוד
6 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.
שאלו שלום ירושלם ישליו אהביך
7 ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”
יהי-שלום בחילך שלוה בארמנותיך
8 ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.
למען אחי ורעי-- אדברה-נא שלום בך
9 ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.
למען בית-יהוה אלהינו-- אבקשה טוב לך

< ಕೀರ್ತನೆಗಳು 122 >