< ಕೀರ್ತನೆಗಳು 123 >
1 ಯಾತ್ರಾ ಗೀತೆ. ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ.
౧యాత్రల కీర్తన పరలోకంలో సింహాసనంపై ఆసీనుడై ఉన్నవాడా, నా కన్నులెత్తి నీ వైపు చూస్తున్నాను.
2 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.
౨సేవకుల కళ్ళు తమ యజమాని చేతి వైపు, దాసి కళ్ళు తన యజమానురాలి చేతి వైపు చూస్తాయి. అలాగే దేవుడైన యెహోవా మనపై కరుణ చూపించేదాకా మన కళ్ళు ఆయనవైపు చూస్తున్నాయి.
3 ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು; ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ.
౩యెహోవా, మమ్మల్ని కరుణించు, మమ్మల్ని కరుణించు. మేము తీవ్ర తిరస్కారానికి గురయ్యాము.
4 ನಾವು ಸುಖಭೋಗಿಗಳ ಗೇಲಿಯನ್ನೂ ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ.
౪అలగాజనం వేసే నిందలతో, గర్విష్ఠుల తిరస్కారాలతో మేము నిండిపోయాము.