< ಕೀರ್ತನೆಗಳು 124 >

1 ದಾವೀದನ ಯಾತ್ರಾ ಗೀತೆ. ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು ಎಂದು ಇಸ್ರಾಯೇಲರೇ ಹೇಳಲಿ.
David ƒe mɔzɔha. Ne menye Yehowae le mía dzi o la, Israel negblɔ be,
2 ವೈರಿಗಳು ನಮಗೆ ವಿರೋಧವಾಗಿ ಎದ್ದಾಗ ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ,
“Ɖe menye Yehowae le mía dzi o la, esi amegbetɔwo tso ɖe mía ŋu,
3 ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು.
eye woƒe dɔmedzoe bi ɖe mía ŋu la, anye ne womi mí agbagbee,
4 ಆಗ ಪ್ರವಾಹವು ನಮ್ಮನ್ನು ಮುಳುಗಿಸುತ್ತಿತ್ತು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
anye ne tsi ɖe mí hesi to mía dzi,
5 ರಭಸ ಪ್ರವಾಹ ನಮ್ಮನ್ನು ಕೊಚ್ಚಿಕೊಂಡು ಹೋಗಿಬಿಡುತ್ತಿತ್ತು.
anye ne tɔ dzeagbowo kplɔ mí dzoe.”
6 ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ ಯೆಹೋವ ದೇವರಿಗೆ ಸ್ತೋತ್ರವಾಗಲಿ.
Woakafu Yehowa, ame si meɖe mɔ be woavuvu mí kple woƒe aɖu o.
7 ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.
Míesi abe xevi si do le mɔtrela ƒe mɔka me la ene; mɔka la tso, eye míesi dzo.
8 ನಮ್ಮ ಸಹಾಯವು ಆಕಾಶವನ್ನೂ, ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು.
Míaƒe xɔname le Yehowa, dziƒo kple anyigba Wɔla la gbɔ.

< ಕೀರ್ತನೆಗಳು 124 >