< ಕೀರ್ತನೆಗಳು 125 >

1 ಯಾತ್ರಾ ಗೀತೆ. ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.
שִׁ֗יר הַֽמַּ֫עֲל֥וֹת הַבֹּטְחִ֥ים בַּיהוָ֑ה כְּֽהַר־צִיּ֥וֹן לֹא־יִ֝מּ֗וֹט לְעוֹלָ֥ם יֵשֵֽׁב׃
2 ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ.
יְֽרוּשָׁלִַ֗ם הָרִים֮ סָבִ֪יב לָ֥הּ וַ֭יהוָה סָבִ֣יב לְעַמּ֑וֹ מֵ֝עַתָּ֗ה וְעַד־עוֹלָֽם׃
3 ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.
כִּ֤י לֹ֪א יָנ֡וּחַ שֵׁ֤בֶט הָרֶ֗שַׁע עַל֮ גּוֹרַ֪ל הַֽצַּדִּ֫יקִ֥ים לְמַ֡עַן לֹא־יִשְׁלְח֖וּ הַצַּדִּיקִ֨ים בְּעַוְלָ֬תָה יְדֵיהֶֽם׃
4 ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.
הֵיטִ֣יבָה יְ֭הוָה לַטּוֹבִ֑ים וְ֝לִֽישָׁרִ֗ים בְּלִבּוֹתָֽם׃
5 ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.
וְהַמַּטִּ֤ים עַֽקַלְקַלּוֹתָ֗ם יוֹלִיכֵ֣ם יְ֭הוָה אֶת־פֹּעֲלֵ֣י הָאָ֑וֶן שָׁ֝ל֗וֹם עַל־יִשְׂרָאֵֽל׃

< ಕೀರ್ತನೆಗಳು 125 >