< ಕೀರ್ತನೆಗಳು 125 >

1 ಯಾತ್ರಾ ಗೀತೆ. ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು. 2 ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ. 3 ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ. 4 ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ. 5 ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.

< ಕೀರ್ತನೆಗಳು 125 >