< ಕೀರ್ತನೆಗಳು 127 >

1 ಸೊಲೊಮೋನನ ಯಾತ್ರಾ ಗೀತೆ. ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.
שיר המעלות לשלמה אם יהוה לא יבנה בית שוא עמלו בוניו בו אם יהוה לא ישמר עיר שוא שקד שומר׃
2 ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.
שוא לכם משכימי קום מאחרי שבת אכלי לחם העצבים כן יתן לידידו שנא׃
3 ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.
הנה נחלת יהוה בנים שכר פרי הבטן׃
4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.
כחצים ביד גבור כן בני הנעורים׃
5 ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.
אשרי הגבר אשר מלא את אשפתו מהם לא יבשו כי ידברו את אויבים בשער׃

< ಕೀರ್ತನೆಗಳು 127 >