< ಕೀರ್ತನೆಗಳು 128 >
1 ಯಾತ್ರಾ ಗೀತೆ. ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
Блажени вси боящиися Господа, ходящии в путех Его:
2 ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.
труды плодов твоих снеси: блажен еси, и добро тебе будет.
3 ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು.
Жена твоя яко лоза плодовита в странах дому твоего:
4 ಯೆಹೋವ ದೇವರಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವಾದ ಹೊಂದುವನು.
сынове твои яко новосаждения масличная окрест трапезы твоея.
5 ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.
Се, тако благословится человек бояйся Господа.
6 ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ.
Благословит тя Господь от Сиона, и узриши благая Иерусалима вся дни живота твоего, и узриши сыны сынов твоих: мир на Израиля.