< ಕೀರ್ತನೆಗಳು 129 >
1 ಯಾತ್ರಾ ಗೀತೆ. “ನನ್ನ ಯೌವನದಿಂದ ನನ್ನನ್ನು ಶತ್ರುಗಳು ಬಹಳ ಬಾಧಿಸಿದ್ದಾರೆ,” ಎಂದು ಇಸ್ರಾಯೇಲು ಹೇಳಲಿ.
Zarándoklás éneke. Sokat szorongattak engem ifjúkorom óta – mondja csak Izraél –
2 “ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.
sokat szorongattak engem ifjúkorom óta, még sem bírtak velem!
3 ಊಳುವವರು ನನ್ನ ಬೆನ್ನಿನ ಮೇಲೆ ಉತ್ತಿದರು, ಉದ್ದವಾದ ಗಾಯಗೆರೆಗಳನ್ನು ಮಾಡಿದರು
Hátamon szántottak a szántók, hosszúra húzták barázdájukat.
4 ಆದರೆ ಯೆಹೋವ ದೇವರು ನೀತಿವಂತರು; ದುಷ್ಟರು ಹಾಕಿದ ಬಂಧಗಳನ್ನು ದೇವರು ಕಡಿದು, ನಮ್ಮನ್ನು ಬಿಡುಗಡೆ ಮಾಡಿದ್ದಾರೆ.”
Az Örökkévaló igazságos: szétvágta a gonoszok kötelét.
5 ಚೀಯೋನನ್ನು ದ್ವೇಷಿಸುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
Szégyent valljanak és hátráljanak meg mind a Czión gyűlölői;
6 ಅವರು ಮಾಳಿಗೆ ಮೇಲಿನ ಹುಲ್ಲಿನಂತೆ ಆಗಲಿ. ಅವು ಬೆಳೆಯುವುದಕ್ಕೆ ಮುಂಚೆ ಒಣಗಿ ಹೋಗುತ್ತದೆ.
legyenek mint a háztetők fűve, mely mielőtt kitépik, elszáradt;
7 ಅದರಿಂದ ಕೊಯ್ಯುವವನು ತನ್ನ ಕೈ ತುಂಬಿಸಿಕೊಳ್ಳನು, ಸಿವುಡು ಕಟ್ಟುವವನು ತನ್ನ ಉಡಿಯನ್ನೂ ತುಂಬಿಸಿಕೊಳ್ಳಲಾರನು.
melylyel nem töltötte meg markát az arató, sem ölét a kévekötő,
8 “ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.
s nem mondták az arra menők: az Örökkévaló áldása reátok! Áldunk titeket az Örökkévaló nevében!