< ಕೀರ್ತನೆಗಳು 13 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?
Yahweh, how long will you continue to forget about me [RHQ]? Will you hide yourself [SYN] from me forever?
2 ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?
How long must I endure anguish/worry? Must I be miserable/sad every day? How long will my enemies continue to defeat me?
3 ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.
Yahweh my God, look at me and answer me. Enable me to become strong [again] [IDM], and do not allow me to die.
4 “ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.
Do not allow my enemies [to boast] saying, “We have defeated him!” Do not allow them to defeat me, with the result that they will rejoice about it!
5 ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.
But I trust that you will faithfully love me; I will rejoice when you rescue me.
6 ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.
Yahweh, you have done many good things for me, so I will sing to you.