< ಕೀರ್ತನೆಗಳು 130 >

1 ಯಾತ್ರಾ ಗೀತೆ. ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.
성전에 올라가는 노래 여호와여 내가 깊은 데서 주께 부르짖었나이다
2 ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.
주여 내 소리를 들으시며 나의 간구하는 소리에 귀를 기울이소서
3 ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?
여호와여 주께서 죄악을 감찰하실진대 주여 누가 서리이까
4 ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.
그러나 사유하심이 주께 있음은 주를 경외케 하심이니이다
5 ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
나 곧 내 영혼이 여호와를 기다리며 내가 그 말씀을 바라는도다
6 ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.
파수꾼이 아침을 기다림보다 내 영혼이 주를 더 기다리나니 참으로 파수꾼의 아침을 기다림보다 더하도다
7 ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.
이스라엘아 여호와를 바랄지어다 여호와께는 인자하심과 풍성한 구속이 있음이라
8 ದೇವರು ಇಸ್ರಾಯೇಲನ್ನು ಅವರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.
저가 이스라엘을 그 모든 죄악에서 구속하시리로다

< ಕೀರ್ತನೆಗಳು 130 >