< ಕೀರ್ತನೆಗಳು 133 >

1 ದಾವೀದನ ಯಾತ್ರಾ ಗೀತೆ. ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!
שִׁ֥יר הַֽמַּעֲל֗וֹת לְדָ֫וִ֥ד הִנֵּ֣ה מַה־טּ֭וֹב וּמַה־נָּעִ֑ים שֶׁ֖בֶת אַחִ֣ים גַּם־יָֽחַד׃
2 ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.
כַּשֶּׁ֤מֶן הַטּ֨וֹב ׀ עַל־הָרֹ֗אשׁ יֹרֵ֗ד עַֽל־הַזָּקָ֥ן זְקַֽן־אַהֲרֹ֑ן שֶׁ֝יֹּרֵ֗ד עַל־פִּ֥י מִדּוֹתָֽיו׃
3 ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.
כְּטַל־חֶרְמ֗וֹן שֶׁיֹּרֵד֮ עַל־הַרְרֵ֪י צִ֫יּ֥וֹן כִּ֤י שָׁ֨ם ׀ צִוָּ֣ה יְ֭הוָה אֶת־הַבְּרָכָ֑ה חַ֝יִּ֗ים עַד־הָעוֹלָֽם׃

< ಕೀರ್ತನೆಗಳು 133 >