< ಕೀರ್ತನೆಗಳು 137 >
1 ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.
當我們坐在巴比倫河畔,一起想熙雍即淚流滿面。
2 ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು.
在那地的楊柳間,掛起我們的琴絃。
3 ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, ನಮಗೆ ಹಾಡನ್ನು ಹಾಡಲು ಹೇಳಿದ್ದರು; ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; “ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು.
因那些俘虜我們的,要我們唱歌,那些迫害我們的,還要我們奏樂:快些來給我們唱一支熙雍的歌!
4 ಅನ್ಯದೇಶದಲ್ಲಿ ನಾವು ಯೆಹೋವ ದೇವರ ಹಾಡುಗಳನ್ನು ಹಾಡುವುದು ಹೇಗೆ?
但我們身處外鄉異域,怎能謳唱上主的歌曲?
5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ, ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ.
耶路撒冷!我如果將您忘掉,願我的右手枯焦!
6 ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.
我若不懷念您,不以耶路撒冷為喜樂,就寧願我的舌頭緊緊貼在我的上顎!
7 ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.
上主,求您記住厄東的子民,在耶路撒冷蒙難的時辰,他們曾喊叫說:拆毀,拆毀!夷為平地,一直見到基礎,
8 ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.
您只知破壞的巴比倫女子!誰若依照您加給我們的災痍,也焄樣報復於您,他就得福祺。
9 ನಿಮ್ಮ ಚಿಕ್ಕ ಕೂಸುಗಳನ್ನು ಹಿಡಿದು, ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
誰若抓起您的嬰兒幼子,摔在盤石上,他就得福祺。