< ಕೀರ್ತನೆಗಳು 139 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ; ನನ್ನನ್ನು ತಿಳಿದುಕೊಂಡಿದ್ದೀರಿ.
לַמְנַצֵּחַ לְדָוִד מִזְמוֹר יְהֹוָה חֲקַרְתַּנִי וַתֵּדָֽע׃
2 ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.
אַתָּה יָדַעְתָּ שִׁבְתִּי וְקוּמִי בַּנְתָּה לְרֵעִי מֵרָחֽוֹק׃
3 ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ; ನನ್ನ ಮಾರ್ಗಗಳೆಲ್ಲಾ ನಿಮಗೆ ಸುಪರಿಚಿತವಾಗಿವೆ.
אׇרְחִי וְרִבְעִי זֵרִיתָ וְֽכׇל־דְּרָכַי הִסְכַּֽנְתָּה׃
4 ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.
כִּי אֵין מִלָּה בִּלְשׁוֹנִי הֵן יְהֹוָה יָדַעְתָּ כֻלָּֽהּ׃
5 ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.
אָחוֹר וָקֶדֶם צַרְתָּנִי וַתָּשֶׁת עָלַי כַּפֶּֽכָה׃
6 ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ.
(פלאיה) [פְּלִיאָֽה] דַעַת מִמֶּנִּי נִשְׂגְּבָה לֹא־אוּכַֽל לָֽהּ׃
7 ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ?
אָנָֽה אֵלֵךְ מֵרוּחֶךָ וְאָנָה מִפָּנֶיךָ אֶבְרָֽח׃
8 ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ. (Sheol h7585)
אִם־אֶסַּק שָׁמַיִם שָׁם אָתָּה וְאַצִּיעָה שְּׁאוֹל הִנֶּֽךָּ׃ (Sheol h7585)
9 ಉದಯದ ರೆಕ್ಕೆಗಳನ್ನು ತೆಗೆದುಕೊಂಡು, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ,
אֶשָּׂא כַנְפֵי־שָׁחַר אֶשְׁכְּנָה בְּאַחֲרִית יָֽם׃
10 ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು, ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು.
גַּם־שָׁם יָדְךָ תַנְחֵנִי וְֽתֹאחֲזֵנִי יְמִינֶֽךָ׃
11 “ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” ಎಂದು ನಾನು ಹೇಳಿದರೂ,
וָאֹמַר אַךְ־חֹשֶׁךְ יְשׁוּפֵנִי וְלַיְלָה אוֹר בַּעֲדֵֽנִי׃
12 ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.
גַּם־חֹשֶׁךְ לֹא־יַחְשִׁיךְ מִמֶּךָּ וְלַיְלָה כַּיּוֹם יָאִיר כַּחֲשֵׁיכָה כָּאוֹרָֽה׃
13 ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
כִּֽי־אַתָּה קָנִיתָ כִלְיֹתָי תְּסֻכֵּנִי בְּבֶטֶן אִמִּֽי׃
14 ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.
אוֹדְךָ עַל כִּי נֽוֹרָאוֹת נִפְלֵיתִי נִפְלָאִים מַעֲשֶׂיךָ וְנַפְשִׁי יֹדַעַת מְאֹֽד׃
15 ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.
לֹֽא־נִכְחַד עׇצְמִי מִמֶּךָּ אֲשֶׁר־עֻשֵּׂיתִי בַסֵּתֶר רֻקַּמְתִּי בְּֽתַחְתִּיּוֹת אָֽרֶץ׃
16 ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.
גׇּלְמִי ׀ רָאוּ עֵינֶיךָ וְעַֽל־סִפְרְךָ כֻּלָּם יִכָּתֵבוּ יָמִים יֻצָּרוּ (ולא) [וְלוֹ] אֶחָד בָּהֶֽם׃
17 ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ! ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!
וְלִי מַה־יָּקְרוּ רֵעֶיךָ אֵל מֶה עָצְמוּ רָאשֵׁיהֶֽם׃
18 ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.
אֶסְפְּרֵם מֵחוֹל יִרְבּוּן הֱקִיצֹתִי וְעוֹדִי עִמָּֽךְ׃
19 ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ!
אִם־תִּקְטֹל אֱלוֹהַּ ׀ רָשָׁע וְאַנְשֵׁי דָמִים סוּרוּ מֶֽנִּי׃
20 ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ.
אֲשֶׁר יֹמְרוּךָ לִמְזִמָּה נָשׂוּא לַשָּׁוְא עָרֶֽיךָ׃
21 ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ? ನಿಮಗೆ ವಿರೋಧವಾಗಿ ತಿರುಗಿ ಬಿದ್ದವರನ್ನು ನಾನು ಹೀನೈಸದಿರುವೆನೋ?
הֲלֽוֹא־מְשַׂנְאֶיךָ יְהֹוָה ׀ אֶשְׂנָא וּבִתְקוֹמְמֶיךָ אֶתְקוֹטָֽט׃
22 ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ; ನಾನು ಅವರನ್ನು ನನ್ನ ಶತ್ರುಗಳಂತೆ ಪರಿಗಣಿಸುತ್ತೇನೆ.
תַּכְלִית שִׂנְאָה שְׂנֵאתִים לְאוֹיְבִים הָיוּ לִֽי׃
23 ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.
חׇקְרֵנִי אֵל וְדַע לְבָבִי בְּחָנֵנִי וְדַע שַׂרְעַפָּֽי׃
24 ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.
וּרְאֵה אִם־דֶּֽרֶךְ־עֹצֶב בִּי וּנְחֵנִי בְּדֶרֶךְ עוֹלָֽם׃

< ಕೀರ್ತನೆಗಳು 139 >