< ಕೀರ್ತನೆಗಳು 14 >
1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.
Dem Sangmeister. Von David. / Die Toren denken bei sich: "Es ist kein Gott." / Verderbt, abscheulich handeln sie; / Da ist keiner, der Gutes tut.
2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.
Jahwe schaut vom Himmel herab auf die Menschenkinder, / Daß er sehe, ob jemand Einsicht habe / Und frage nach Gott.
3 ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ.
Aber sie alle sind abgefallen, alle entartet; / Da ist keiner, der Gutes tut, / Auch nicht ein einziger.
4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.
"Sind denn so unvernünftig alle Übeltäter, / Die mein Volk verzehren, wie man Brot verzehrt, / Die nicht zu Jahwe beten?"
5 ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.
Dann beben sie schaudernd, / Denn Gott weilt bei dem gerechten Volk.
6 ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ.
Mögt ihr auch vereiteln der Dulder Wunsch — / Jahwe bleibt doch ihre Zuflucht.
7 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.
Ach, käme aus Zion für Israel Heil! / Wendet Jahwe das Los seines Volks, / So wird Jakob sich freun und Israel jauchzen.