< ಕೀರ್ತನೆಗಳು 140 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ.
למנצח מזמור לדוד חלצני יהוה מאדם רע מאיש חמסים תנצרני׃
2 ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.
אשר חשבו רעות בלב כל יום יגורו מלחמות׃
3 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.
שננו לשונם כמו נחש חמת עכשוב תחת שפתימו סלה׃
4 ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ.
שמרני יהוה מידי רשע מאיש חמסים תנצרני אשר חשבו לדחות פעמי׃
5 ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.
טמנו גאים פח לי וחבלים פרשו רשת ליד מעגל מקשים שתו לי סלה׃
6 ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ.
אמרתי ליהוה אלי אתה האזינה יהוה קול תחנוני׃
7 ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ.
יהוה אדני עז ישועתי סכתה לראשי ביום נשק׃
8 ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”
אל תתן יהוה מאויי רשע זממו אל תפק ירומו סלה׃
9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ.
ראש מסבי עמל שפתימו יכסומו׃
10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ.
ימיטו עליהם גחלים באש יפלם במהמרות בל יקומו׃
11 ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ.
איש לשון בל יכון בארץ איש חמס רע יצודנו למדחפת׃
12 ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.
ידעת כי יעשה יהוה דין עני משפט אבינים׃
13 ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.
אך צדיקים יודו לשמך ישבו ישרים את פניך׃

< ಕೀರ್ತನೆಗಳು 140 >