< ಕೀರ್ತನೆಗಳು 141 >
1 ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ.
上主,我呼求您,請求速來救助我;上主,我呼求您,請您聽我的呼號。
2 ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.
願我向您的祈禱,像馨香上升;願我的手高舉,如同晚祭的高騰。
3 ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ;
上主,求您在我的口邊派守衛,求您在我的唇前派警備。
4 ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.
莫讓我的心傾向邪道,免得我再去犯罪作惡;莫讓我與惡人同作壞事,免得我嚐食他們的美味。
5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.
義人責打我,算是我的恩遇,他責斥我,是給我頭的傅油。我的頭也決不會加以抗拒,我仍然為迫害我的人祈求。
6 ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.
當他們的首領被拋於巖石時,纔感覺到我的話是如何甘飴。
7 ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.” (Sheol )
他們的骨頭被棄置在陰府門旁,像人耕地掘田,將土塊任意拋放。 (Sheol )
8 ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.
上主天主,我的雙目一直仰望你,我信賴你,不要將我的靈魂拋棄。
9 ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.
求你保護我免陷於他們為我設的網羅,求你使我能夠脫離為非作歹者的圈套。
10 ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.
願惡人一起墮入自設的網羅,而我卻得以安然無恙地脫逃。