< ಕೀರ್ತನೆಗಳು 142 >

1 ದಾವೀದನ ಮಾಸ್ಕಿಲ ರಾಗದ ಪದ್ಯ. ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.
משכיל לדוד בהיותו במערה תפלה קולי אל יהוה אזעק קולי אל יהוה אתחנן׃
2 ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.
אשפך לפניו שיחי צרתי לפניו אגיד׃
3 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.
בהתעטף עלי רוחי ואתה ידעת נתיבתי בארח זו אהלך טמנו פח לי׃
4 ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.
הביט ימין וראה ואין לי מכיר אבד מנוס ממני אין דורש לנפשי׃
5 ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”
זעקתי אליך יהוה אמרתי אתה מחסי חלקי בארץ החיים׃
6 ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.
הקשיבה אל רנתי כי דלותי מאד הצילני מרדפי כי אמצו ממני׃
7 ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.
הוציאה ממסגר נפשי להודות את שמך בי יכתרו צדיקים כי תגמל עלי׃

< ಕೀರ್ತನೆಗಳು 142 >