< ಕೀರ್ತನೆಗಳು 144 >
1 ದಾವೀದನ ಕೀರ್ತನೆ. ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.
[A Psalm] of David. Blessed [be] the LORD my strength, who teacheth my hands to war, [and] my fingers to fight;
2 ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.
My goodness, and my fortress; my high tower, and my deliverer; my shield, and [he] in whom I trust; who subdueth my people under me.
3 ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು?
LORD, what [is] man, that thou takest knowledge of him! [or] the son of man, that thou makest account of him!
4 ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.
Man is like to vanity: his days [are] as a shadow that passeth away.
5 ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು.
Bow thy heavens, O LORD, and come down: touch the mountains, and they shall smoke.
6 ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ.
Cast forth lightning, and scatter them: shoot thy arrows, and destroy them.
7 ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ.
Send thy hand from above; rid me, and deliver me out of great waters, from the hand of strange children;
8 ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ.
Whose mouth speaketh vanity, and their right hand [is] a right hand of falsehood.
9 ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು.
I will sing a new song to thee, O God: upon a psaltery [and] an instrument of ten strings will I sing praises to thee.
10 ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.
[It is he] that giveth salvation to kings: who delivereth David his servant from the hurtful sword.
11 ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.
Rid me, and deliver me from the hand of strange children, whose mouth speaketh vanity, and their right hand [is] a right hand of falsehood:
12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.
That our sons [may be] as plants grown up in their youth; [that] our daughters [may be] as corner stones, polished [after] the similitude of a palace:
13 ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ.
[That] our granaries [may be] full, affording all manner of store; [that] our sheep may bring forth thousands and ten thousands in our streets:
14 ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.
[That] our oxen [may be] strong to labor; that [there be] no breaking in, nor going out; that [there be] no complaining in our streets.
15 ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.
Happy [is that] people, that is in such a case: [yes], happy [is that] people, whose God [is] the LORD.