< ಕೀರ್ತನೆಗಳು 145 >

1 ದಾವೀದನ ಕೀರ್ತನೆ. ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
תְּהִלָּ֗ה לְדָ֫וִ֥ד אֲרוֹמִמְךָ֣ אֱלוֹהַ֣י הַמֶּ֑לֶךְ וַאֲבָרֲכָ֥ה שִׁ֝מְךָ֗ לְעוֹלָ֥ם וָעֶֽד׃
2 ಪ್ರತಿದಿನ ನಿಮ್ಮನ್ನು ಸ್ತುತಿಸುವೆನು; ಎಂದೆಂದಿಗೂ ಸ್ತುತಿಸುವೆನು.
בְּכָל־י֥וֹם אֲבָרֲכֶ֑ךָּ וַאֲהַלְלָ֥ה שִׁ֝מְךָ֗ לְעוֹלָ֥ם וָעֶֽד׃
3 ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. ಅವರ ಮಹತ್ವವು ಅಗಮ್ಯವಾದದ್ದು.
גָּ֘ד֤וֹל יְהוָ֣ה וּמְהֻלָּ֣ל מְאֹ֑ד וְ֝לִגְדֻלָּת֗וֹ אֵ֣ין חֵֽקֶר׃
4 ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ.
דּ֣וֹר לְ֭דוֹר יְשַׁבַּ֣ח מַעֲשֶׂ֑יךָ וּגְב֖וּרֹתֶ֣יךָ יַגִּֽידוּ׃
5 ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು,
הֲ֭דַר כְּב֣וֹד הוֹדֶ֑ךָ וְדִבְרֵ֖י נִפְלְאוֹתֶ֣יךָ אָשִֽׂיחָה׃
6 ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು.
וֶעֱז֣וּז נוֹרְאֹתֶ֣יךָ יֹאמֵ֑רוּ וּגְדוּלָּתְךָ֥ אֲסַפְּרֶֽנָּה׃
7 ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
זֵ֣כֶר רַב־טוּבְךָ֣ יַבִּ֑יעוּ וְצִדְקָתְךָ֥ יְרַנֵּֽנוּ׃
8 ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.
חַנּ֣וּן וְרַח֣וּם יְהוָ֑ה אֶ֥רֶךְ אַ֝פַּ֗יִם וּגְדָל־חָֽסֶד׃
9 ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.
טוֹב־יְהוָ֥ה לַכֹּ֑ל וְ֝רַחֲמָ֗יו עַל־כָּל־מַעֲשָֽׂיו׃
10 ಯೆಹೋವ ದೇವರೇ, ನಿಮ್ಮ ನಂಬಿಗಸ್ತರು ನಿಮ್ಮನ್ನು ಸ್ತುತಿಸುವರು.
יוֹד֣וּךָ יְ֭הוָה כָּל־מַעֲשֶׂ֑יךָ וַ֝חֲסִידֶ֗יךָ יְבָרֲכֽוּכָה׃
11 ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು; ನಿಮ್ಮ ಪರಾಕ್ರಮವನ್ನು ನುಡಿಯುವರು.
כְּב֣וֹד מַלְכוּתְךָ֣ יֹאמֵ֑רוּ וּגְבוּרָתְךָ֥ יְדַבֵּֽרוּ׃
12 ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
לְהוֹדִ֤יעַ ׀ לִבְנֵ֣י הָ֭אָדָם גְּבוּרֹתָ֑יו וּ֝כְב֗וֹד הֲדַ֣ר מַלְכוּתֽוֹ׃
13 ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.
מַֽלְכוּתְךָ֗ מַלְכ֥וּת כָּל־עֹֽלָמִ֑ים וּ֝מֶֽמְשֶׁלְתְּךָ֗ בְּכָל־דּ֥וֹר וָדֽוֹר׃ נֶאֱמָן יְהוָה בְּכָל־דְּבָרָיו וְחָסִיד בְּכָל־מַעֲשָׂיו׃
14 ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ.
סוֹמֵ֣ךְ יְ֭הוָה לְכָל־הַנֹּפְלִ֑ים וְ֝זוֹקֵ֗ף לְכָל־הַכְּפוּפִֽים׃
15 ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ. ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ.
עֵֽינֵי־כֹ֭ל אֵלֶ֣יךָ יְשַׂבֵּ֑רוּ וְאַתָּ֤ה נֽוֹתֵן־לָהֶ֖ם אֶת־אָכְלָ֣ם בְּעִתּֽוֹ׃
16 ನಿಮ್ಮ ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ.
פּוֹתֵ֥חַ אֶת־יָדֶ֑ךָ וּמַשְׂבִּ֖יעַ לְכָל־חַ֣י רָצֽוֹן׃
17 ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.
צַדִּ֣יק יְ֭הוָה בְּכָל־דְּרָכָ֑יו וְ֝חָסִ֗יד בְּכָל־מַעֲשָֽׂיו׃
18 ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.
קָר֣וֹב יְ֭הוָה לְכָל־קֹרְאָ֑יו לְכֹ֤ל אֲשֶׁ֖ר יִקְרָאֻ֣הוּ בֶאֱמֶֽת׃
19 ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.
רְצוֹן־יְרֵאָ֥יו יַעֲשֶׂ֑ה וְֽאֶת־שַׁוְעָתָ֥ם יִ֝שְׁמַ֗ע וְיוֹשִׁיעֵֽם׃
20 ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ.
שׁוֹמֵ֣ר יְ֭הוָה אֶת־כָּל־אֹהֲבָ֑יו וְאֵ֖ת כָּל־הָרְשָׁעִ֣ים יַשְׁמִֽיד׃
21 ನನ್ನ ಬಾಯಿ ಯೆಹೋವ ದೇವರ ಸ್ತೋತ್ರವನ್ನು ನುಡಿಯಲಿ; ಸಮಸ್ತ ಜೀವಿಗಳು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
תְּהִלַּ֥ת יְהוָ֗ה יְֽדַבֶּ֫ר־פִּ֥י וִיבָרֵ֣ךְ כָּל־בָּ֭שָׂר שֵׁ֥ם קָדְשׁ֗וֹ לְעוֹלָ֥ם וָעֶֽד׃

< ಕೀರ್ತನೆಗಳು 145 >