< ಕೀರ್ತನೆಗಳು 148 >
1 ಯೆಹೋವ ದೇವರನ್ನು ಸ್ತುತಿಸಿರಿ. ಆಕಾಶ ಮಂಡಲದಿಂದ ಯೆಹೋವ ದೇವರಿಗೆ ಸ್ತುತಿ ಸಲ್ಲಲಿ! ಮಹೋನ್ನತದ ದೇವರನ್ನು ಸ್ತುತಿಸಿರಿ.
Aleluja! Hvalite Jahvu s nebesa, hvalite ga u visinama!
2 ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.
Hvalite ga, svi anđeli njegovi, hvalite ga, sve vojske njegove!
3 ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ.
Hvalite ga, sunce i mjeseče, hvalite ga, sve zvijezde svjetlosne!
4 ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ.
Hvalite ga, nebesa nebeska, i vode nad svodom nebeskim!
5 ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು.
Neka hvale ime Jahvino jer on zapovjedi i postadoše.
6 ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.
Postavi ih zauvijek i dovijeka po zakonu koji neće proći.
7 ಭೂಮಿಯಿಂದ ಯೆಹೋವ ದೇವರನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
Hvalite Jahvu sa zemlje, nemani morske i svi bezdani!
8 ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,
Ognju i grÓade, sniježe i maglo, olujni vjetre, što riječ njegovu izvršavaš!
9 ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
Gore i svi brežuljci, plodonosna stabla i svi cedrovi!
10 ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ,
Zvijeri i sve životinje, gmizavci i ptice krilate!
11 ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ,
Zemaljski kraljevi i svi narodi, knezovi i suci zemaljski!
12 ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ವೃದ್ಧರೇ.
Mladići i djevojke, starci s djecom zajedno:
13 ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.
nek' svi hvale ime Jahvino, jer jedino je njegovo ime uzvišeno! Njegovo veličanstvo zemlju i nebo nadvisuje,
14 ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.
on podiže snagu svom narodu, on proslavlja svete svoje, sinove Izraelove - narod njemu blizak. Aleluja!