< ಕೀರ್ತನೆಗಳು 15 >

1 ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು? ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?
【誠實正直安居聖山】上主,誰能在您的帳幕裏居住?上主,誰能在您的聖山上安居?
2 ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;
只有那行為正直,作事公平,從自己心裏說誠實話的人。
3 ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;
他決不信口非議,危害兄弟,更不會對鄰里,仗勢欺人。
4 ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.
他睥視那作惡犯罪的人,他重視敬愛天主的人;他宣誓雖損己,亦不作廢,
5 ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.
他從不放債,貪取重利;他從不受賄,傷無罪;這樣行事的人,永定不移。

< ಕೀರ್ತನೆಗಳು 15 >