< ಕೀರ್ತನೆಗಳು 150 >

1 ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.
KAPINA Kot nan japwilim a tanpaj jaraui; kapina i duen a manaman akan.
2 ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.
Kapina i duen a wiawia kan; kapina i ni a linan lapalap!
3 ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.
Kapina i ki trompete; kapina i ki arp o laute!
4 ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.
Kapina i ki aip o pwin en pokol; kapina i ki jal en kajan o pilote.
5 ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.
Kapina i ki jimpel; kapina i ki jimpel kajelel!
6 ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. ಯೆಹೋವ ದೇವರಿಗೆ ಸ್ತೋತ್ರ!
Karoj, me kin memaur, en kapina leowa! Aleluia!

< ಕೀರ್ತನೆಗಳು 150 >