< ಕೀರ್ತನೆಗಳು 17 >
1 ದಾವೀದನ ಪ್ರಾರ್ಥನೆ. ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.
Oratio David. Exaudi Domine iustitiam meam: intende deprecationem meam. Auribus percipe orationem meam, non in labiis dolosis.
2 ನನ್ನ ನ್ಯಾಯವು ನಿಮ್ಮಿಂದಲೇ ಬರಲಿ, ನಿಮ್ಮ ಕಣ್ಣುಗಳು ಸರಿಯಾದವುಗಳನ್ನೇ ನೋಡುತ್ತವೆ.
De vultu tuo iudicium meum prodeat: oculi tui videant æquitates.
3 ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.
Probasti cor meum, et visitasti nocte: igne me examinasti, et non est inventa in me iniquitas.
4 ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.
Ut non loquatur os meum opera hominum: propter verba labiorum tuorum ego custodivi vias duras.
5 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.
Perfice gressus meos in semitis tuis: ut non moveantur vestigia mea.
6 ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನೀವು ನಿಮ್ಮ ಕಿವಿಯನ್ನು ನನ್ನ ಕಡೆ ತಿರುಗಿಸಿ, ನನ್ನ ಪ್ರಾರ್ಥನೆಯನ್ನು ಆಲಿಸಿರಿ.
Ego clamavi, quoniam exaudisti me Deus: inclina aurem tuam mihi, et exaudi verba mea.
7 ನಿಮ್ಮ ಒಡಂಬಡಿಕೆಯ ಪ್ರೀತಿಯ ಅದ್ಭುತವನ್ನು ನನಗೆ ತೋರಿಸಿರಿ. ತಮ್ಮ ವೈರಿಗಳಿಂದ ಓಡಿಬಂದು ನಿಮ್ಮಲ್ಲಿ ಆಶ್ರಯ ಪಡೆಯುವವರಿಗೆ ಭುಜಬಲದಿಂದ ರಕ್ಷಿಸುವವರು ನೀವೇ.
Mirifica misericordias tuas, qui salvos facis sperantes in te.
8 ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.
A resistentibus dexteræ tuæ custodi me, ut pupillam oculi. Sub umbra alarum tuarum protege me:
9 ನನ್ನನ್ನು ಬಾಧಿಸುವ ದುಷ್ಟರಿಂದಲೂ, ನನ್ನನ್ನು ಸುತ್ತಿಕೊಳ್ಳುವ ನನ್ನ ಪ್ರಾಣಾಂತಕ ಶತ್ರುಗಳಿಂದಲೂ ತಪ್ಪಿಸಿ.
a facie impiorum qui me afflixerunt. Inimici mei animam meam circumdederunt,
10 ಅವರು ತಮ್ಮ ಸೊಕ್ಕಿನ ಹೃದಯಗಳನ್ನು ಮುಚ್ಚಿಕೊಂಡಿದ್ದಾರೆ, ತಮ್ಮ ಬಾಯಿಂದ ಅವರು ಗರ್ವವನ್ನು ಮಾತನಾಡುತ್ತಾರೆ.
adipem suum concluserunt: os eorum locutum est superbiam.
11 ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ, ನನ್ನನ್ನು ನೆಲಕ್ಕೆ ಹಾಕಬೇಕೆಂದು ಅವರ ಕಣ್ಣುಗಳು ಕಾದಿವೆ.
Proiicientes me nunc circumdederunt me: oculos suos statuerunt declinare in terram.
12 ಅವರು ತಮ್ಮ ಬೇಟೆಯ ಹಸಿವೆಯಿಂದಿರುವ ಸಿಂಹದ ಹಾಗೆಯೂ, ಗುಪ್ತಸ್ಥಳಗಳಲ್ಲಿ ಹೊಂಚಿ ಕುಳಿತಿರುವ ಭೀಕರ ಸಿಂಹದ ಹಾಗೆಯೂ ಇದ್ದಾರೆ.
Susceperunt me sicut leo paratus ad prædam: et sicut catulus leonis habitans in abditis.
13 ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.
Exurge Domine, præveni eum, et supplanta eum: eripe animam meam ab impio, frameam tuam
14 ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.
ab inimicis manus tuæ. Domine a paucis de terra divide eos in vita eorum: de absconditis tuis adimpletus est venter eorum. Saturati sunt filiis: et dimiserunt reliquias suas parvulis suis.
15 ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.
Ego autem in iustitia apparebo conspectui tuo: satiabor cum apparuerit gloria tua.