< ಕೀರ್ತನೆಗಳು 18 >

1 ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಯೆಹೋವ ದೇವರ ಸೇವಕನಾದ ದಾವೀದನು ಎಲ್ಲಾ ಶತ್ರುಗಳಿಂದಲೂ ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು. ದಾವೀದನು ಹೀಗೆ ಹೇಳಿದನು: ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.
لِإِمَامِ ٱلْمُغَنِّينَ. لِعَبْدِ ٱلرَّبِّ دَاوُدَ ٱلَّذِي كَلَّمَ ٱلرَّبَّ بِكَلَامِ هَذَا ٱلنَّشِيدِ فِي ٱلْيَوْمِ ٱلَّذِي أَنْقَذَهُ فِيهِ ٱلرَّبُّ مِنْ أَيْدِي كُلِّ أَعْدَائِهِ وَمِنْ يَدِ شَاوُلَ. فَقَالَ: أُحِبُّكَ يَارَبُّ، يَا قُوَّتِي.١
2 ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.
ٱلرَّبُّ صَخْرَتِي وَحِصْنِي وَمُنْقِذِي. إِلَهِي صَخْرَتِي بِهِ أَحْتَمِي. تُرْسِي وَقَرْنُ خَلَاصِي وَمَلْجَإِي.٢
3 ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.
أَدْعُو ٱلرَّبَّ ٱلْحَمِيدَ، فَأَتَخَلَّصُ مِنْ أَعْدَائِي.٣
4 ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.
اِكْتَنَفَتْنِي حِبَالُ ٱلْمَوْتِ، وَسُيُولُ ٱلْهَلَاكِ أَفْزَعَتْنِي.٤
5 ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು. (Sheol h7585)
حِبَالُ ٱلْهَاوِيَةِ حَاقَتْ بِي. أَشْرَاكُ ٱلْمَوْتِ ٱنْتَشَبَتْ بِي. (Sheol h7585)٥
6 ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.
فِي ضِيقِي دَعَوْتُ ٱلرَّبَّ، وَإِلَى إِلَهِي صَرَخْتُ، فَسَمِعَ مِنْ هَيْكَلِهِ صَوْتِي، وَصُرَاخِي قُدَّامَهُ دَخَلَ أُذُنَيْهِ.٦
7 ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.
فَٱرْتَجَّتِ ٱلْأَرْضُ وَٱرْتَعَشَتْ، أُسُسُ ٱلْجِبَالِ ٱرْتَعَدَتْ وَٱرْتَجَّتْ لِأَنَّهُ غَضِبَ.٧
8 ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,
صَعِدَ دُخَانٌ مِنْ أَنْفِهِ، وَنَارٌ مِنْ فَمِهِ أَكَلَتْ. جَمْرٌ ٱشْتَعَلَتْ مِنْهُ.٨
9 ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು.
طَأْطَأَ ٱلسَّمَاوَاتِ وَنَزَلَ، وَضَبَابٌ تَحْتَ رِجْلَيْهِ.٩
10 ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.
رَكِبَ عَلَى كَرُوبٍ وَطَارَ، وَهَفَّ عَلَى أَجْنِحَةِ ٱلرِّيَاحِ.١٠
11 ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ ಮಳೆ ತರುವ ಆಕಾಶದ ಕಾರ್ಮೋಡಗಳನ್ನು ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು.
جَعَلَ ٱلظُّلْمَةَ سِتْرَهُ. حَوْلَهُ مِظَلَّتَهُ ضَبَابَ ٱلْمِيَاهِ وَظَلَامَ ٱلْغَمَامِ.١١
12 ಅವರ ಸನ್ನಿಧಿಯ ಪ್ರಕಾಶದಿಂದ ಮೋಡಗಳು, ಕಲ್ಮಳೆ ಹಾಗೂ ಗುಡುಗು ಮಿಂಚುಗಳು ಹೊರಹೊಮ್ಮಿದವು.
مِنَ ٱلشُّعَاعِ قُدَّامَهُ عَبَرَتْ سُحُبُهُ. بَرَدٌ وَجَمْرُ نَارٍ.١٢
13 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.
أَرْعَدَ ٱلرَّبُّ مِنَ ٱلسَّمَاوَاتِ، وَٱلْعَلِيُّ أَعْطَى صَوْتَهُ، بَرَدًا وَجَمْرَ نَارٍ.١٣
14 ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.
أَرْسَلَ سِهَامَهُ فَشَتَّتَهُمْ، وَبُرُوقًا كَثِيرَةً فَأَزْعَجَهُمْ،١٤
15 ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.
فَظَهَرَتْ أَعْمَاقُ ٱلْمِيَاهِ، وَٱنْكَشَفَتْ أُسُسُ ٱلْمَسْكُونَةِ مِنْ زَجْرِكَ يَارَبُّ، مِنْ نَسْمَةِ رِيحِ أَنْفِكَ.١٥
16 ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.
أَرْسَلَ مِنَ ٱلْعُلَى فَأَخَذَنِي. نَشَلَنِي مِنْ مِيَاهٍ كَثِيرَةٍ.١٦
17 ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.
أَنْقَذَنِي مِنْ عَدُوِّي ٱلْقَوِيِّ، وَمِنْ مُبْغِضِيَّ لِأَنَّهُمْ أَقْوَى مِنِّي.١٧
18 ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.
أَصَابُونِي فِي يَوْمِ بَلِيَّتِي، وَكَانَ ٱلرَّبُّ سَنَدِي.١٨
19 ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.
أَخْرَجَنِي إِلَى ٱلرُّحْبِ. خَلَّصَنِي لِأَنَّهُ سُرَّ بِي.١٩
20 ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.
يُكَافِئُنِي ٱلرَّبُّ حَسَبَ بِرِّي. حَسَبَ طَهَارَةِ يَدَيَّ يَرُدُّ لِي.٢٠
21 ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
لِأَنِّي حَفِظْتُ طُرُقَ ٱلرَّبِّ، وَلَمْ أَعْصِ إِلَهِي.٢١
22 ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.
لِأَنَّ جَمِيعَ أَحْكَامِهِ أَمَامِي، وَفَرَائِضَهُ لَمْ أُبْعِدْهَا عَنْ نَفْسِي.٢٢
23 ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.
وَأَكُونُ كَامِلًا مَعَهُ وَأَتَحَفَّظُ مِنْ إِثْمِي.٢٣
24 ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.
فَيَرُدُّ ٱلرَّبُّ لِي كَبِرِّي، وَكَطَهَارَةِ يَدَيَّ أَمَامَ عَيْنَيْهِ.٢٤
25 ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.
مَعَ ٱلرَّحِيمِ تَكُونُ رَحِيمًا. مَعَ ٱلرَّجُلِ ٱلْكَامِلِ تَكُونُ كَامِلًا.٢٥
26 ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.
مَعَ ٱلطَّاهِرِ تَكُونُ طَاهِرًا، وَمَعَ ٱلْأَعْوَجِ تَكُونُ مُلْتَوِيًا.٢٦
27 ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.
لِأَنَّكَ أَنْتَ تُخَلِّصُ ٱلشَّعْبَ ٱلْبَائِسَ، وَٱلْأَعْيُنُ ٱلْمُرْتَفِعَةُ تَضَعُهَا.٢٧
28 ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.
لِأَنَّكَ أَنْتَ تُضِيءُ سِرَاجِي. ٱلرَّبُّ إِلَهِي يُنِيرُ ظُلْمَتِي.٢٨
29 ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.
لِأَنِّي بِكَ ٱقْتَحَمْتُ جَيْشًا، وَبِإِلَهِي تَسَوَّرْتُ أَسْوَارًا.٢٩
30 ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
ٱللهُ طَرِيقُهُ كَامِلٌ. قَوْلُ ٱلرَّبِّ نَقِيٌّ. تُرْسٌ هُوَ لِجَمِيعِ ٱلْمُحْتَمِينَ بِهِ.٣٠
31 ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ ಯಾರು?
لِأَنَّهُ مَنْ هُوَ إِلَهٌ غَيْرُ ٱلرَّبِّ؟ وَمَنْ هُوَ صَخْرَةٌ سِوَى إِلَهِنَا؟٣١
32 ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.
ٱلْإِلَهُ ٱلَّذِي يُمَنْطِقُنِي بِٱلْقُوَّةِ وَيُصَيِّرُ طَرِيقِي كَامِلًا.٣٢
33 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.
ٱلَّذِي يَجْعَلُ رِجْلَيَّ كَٱلْإِيَّلِ، وَعَلَى مُرْتَفِعَاتِي يُقِيمُنِي.٣٣
34 ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.
ٱلَّذِي يُعَلِّمُ يَدَيَّ ٱلْقِتَالَ، فَتُحْنَى بِذِرَاعَيَّ قَوْسٌ مِنْ نُحَاسٍ.٣٤
35 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
وَتَجْعَلُ لِي تُرْسَ خَلَاصِكَ وَيَمِينُكَ تَعْضُدُنِي، وَلُطْفُكَ يُعَظِّمُنِي.٣٥
36 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.
تُوَسِّعُ خُطُوَاتِي تَحْتِي، فَلَمْ تَتَقَلْقَلْ عَقِبَايَ.٣٦
37 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ; ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.
أَتْبَعُ أَعْدَائِي فَأُدْرِكُهُمْ، وَلَا أَرْجِعُ حَتَّى أُفْنِيَهُمْ.٣٧
38 ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.
أَسْحَقُهُمْ فَلَا يَسْتَطِيعُونَ ٱلْقِيَامَ. يَسْقُطُونَ تَحْتَ رِجْلَيَّ.٣٨
39 ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.
تُمَنْطِقُنِي بِقُوَّةٍ لِلْقِتَالِ. تَصْرَعُ تَحْتِي ٱلْقَائِمِينَ عَلَيَّ.٣٩
40 ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.
وَتُعْطِينِي أَقْفِيَةَ أَعْدَائِي، وَمُبْغِضِيَّ أُفْنِيهِمْ.٤٠
41 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.
يَصْرُخُونَ وَلَا مُخَلِّصَ. إِلَى ٱلرَّبِّ فَلَا يَسْتَجِيبُ لَهُمْ.٤١
42 ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.
فَأَسْحَقُهُمْ كَٱلْغُبَارِ قُدَّامَ ٱلرِّيحِ. مِثْلَ طِينِ ٱلْأَسْوَاقِ أَطْرَحُهُمْ.٤٢
43 ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.
تُنْقِذُنِي مِنْ مُخَاصَمَاتِ ٱلشَّعْبِ. تَجْعَلُنِي رَأْسًا لِلْأُمَمِ. شَعْبٌ لَمْ أَعْرِفْهُ يَتَعَبَّدُ لِي.٤٣
44 ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.
مِنْ سَمَاعِ ٱلْأُذُنِ يَسْمَعُونَ لِي. بَنُو ٱلْغُرَبَاءِ يَتَذَلَّلُونَ لِي.٤٤
45 ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.
بَنُو ٱلْغُرَبَاءِ يَبْلَوْنَ وَيَزْحَفُونَ مِنْ حُصُونِهِمْ.٤٥
46 ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.
حَيٌّ هُوَ ٱلرَّبُّ، وَمُبَارَكٌ صَخْرَتِي، وَمُرْتَفِعٌ إِلَهُ خَلَاصِي،٤٦
47 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.
ٱلْإِلَهُ ٱلْمُنْتَقِمُ لِي، وَٱلَّذِي يُخْضِعُ ٱلشُّعُوبَ تَحْتِي.٤٧
48 ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.
مُنَجِّيَّ مِنْ أَعْدَائِي. رَافِعِي أَيْضًا فَوْقَ ٱلْقَائِمِينَ عَلَيَّ. مِنَ ٱلرَّجُلِ ٱلظَّالِمِ تُنْقِذُنِي.٤٨
49 ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.
لِذَلِكَ أَحْمَدُكَ يَارَبُّ فِي ٱلْأُمَمِ، وَأُرَنِّمُ لِٱسْمِكَ.٤٩
50 ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.
بُرْجُ خَلَاصٍ لِمَلِكِهِ، وَٱلصَّانِعُ رَحْمَةً لِمَسِيحِهِ، لِدَاوُدَ وَنَسْلِهِ إِلَى ٱلْأَبَدِ.٥٠

< ಕೀರ್ತನೆಗಳು 18 >