< ಕೀರ್ತನೆಗಳು 2 >

1 ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?
Псалом Давида. Зачем мятутся народы, и племена замышляют тщетное?
2 ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.
Восстают цари земли, и князья совещаются вместе против Господа и против Помазанника Его.
3 “ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.
“Расторгнем узы их, и свергнем с себя оковы их”.
4 ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.
Живущий на небесах посмеется, Господь поругается им.
5 ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,
Тогда скажет им во гневе Своем и яростью Своею приведет их в смятение:
6 “ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”
“Я помазал Царя Моего над Сионом, святою горою Моею;
7 ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.
возвещу определение: Господь сказал Мне: Ты Сын Мой; Я ныне родил Тебя;
8 ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.
проси у Меня, и дам народы в наследие Тебе и пределы земли во владение Тебе;
9 ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”
Ты поразишь их жезлом железным; сокрушишь их, как сосуд горшечника”.
10 ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.
Итак вразумитесь, цари; научитесь, судьи земли!
11 ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.
Служите Господу со страхом и радуйтесь с трепетом.
12 ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.
Почтите Сына, чтобы Он не прогневался, и чтобы вам не погибнуть в пути вашем, ибо гнев Его возгорится вскоре. Блаженны все, уповающие на Него.

< ಕೀರ್ತನೆಗಳು 2 >